ಚಾಮರಾಜನಗರ: ನಗರ, ಪಟ್ಟಣಗಳು ಬೆಳೆಯುತ್ತಾ ಹೋದಂತೆ ರಸ್ತೆಗಿಳಿಯುತ್ತಿರುವ ವಾಹನಗಳ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಪಾರ್ಕಿಂಗ್ ಸಮಸ್ಯೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಸ್ಥಳೀಯ ಆಡಳಿತಗಳು ವಾಹನಗಳ ನಿಲುಗಡೆಗೆ ಪ್ರತ್ಯೇಕ ಜಾಗ ಮೀಸಲಿಡದ ಪರಿಣಾಮ ಸವಾರರು ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸಿ ಹೋಗುತ್ತಿದ್ದು ಸಂಚಾರ ದಟ್ಟಣೆ ಮಿತಿ ಮೀರುತ್ತಿದೆ.

ಜಿಲ್ಲಾ ಕೇಂದ್ರವಾದ ಚಾಮರಾಜನಗರದಲ್ಲಿ ಪಾರ್ಕಿಂಗ್ ಸಮಸ್ಯೆ ಕಗ್ಗಂಟಾಗಿ ಪರಿಣಮಿಸಿದೆ. ಜೆಎಸ್ಎಸ್ ಶಾಲೆ, ಕಾಲೇಜು, ಆಸ್ಪತ್ರೆ, ಚಿತ್ರಮಂದಿರ, ಶಾಪಿಂಗ್, ಮಾಲ್, ವಾಹನಗಳ ಮಾರಾಟ ಶೋರೂಂ, ಜಿಲ್ಲಾ ಆಸ್ಪತ್ರೆ, ಜಿಲ್ಲಾಡಳಿತ ಭವನ, ಎಸ್ಪಿ ಕಚೇರಿ, ಸೆಸ್ಕ್ ಕಚೇರಿ ಸೇರಿದಂತೆ ಪ್ರಮುಖ ವಾಣಿಜ್ಯ ಕೇಂದ್ರಗಳು ಇರುವ ಬಿ.ರಾಚಯ್ಯ ಜೋಡಿಯಲ್ಲಿ ವಾಹನಗಳ ನಿಲುಗಡೆಯೇ ಪ್ರಯಾಸವಾಗಿದೆ.

ಜೋಡಿ ರಸ್ತೆಯ ಪಾದಚಾರಿ ಮಾರ್ಗದ ಅರ್ಧಭಾಗವನ್ನು ವಾಣಿಜ್ಯ ಮಳಿಗೆಗಳ ಮಾಲೀಕರು ಒತ್ತುವರಿ ಮಾಡಿಕೊಂಡಿದ್ದರೆ ಉಳಿದರ್ಧ ಭಾಗವನ್ನು ವಾಹನ ಸವಾರರು ಅತಿಕ್ರಮಿಸಿಕೊಂಡಿದ್ದಾರೆ. ರಸ್ತೆಯ ಅರ್ಧಭಾಗ ವಾಹನಗಳ ನಿಲುಗಡೆಗೆ ಬಳಕೆಯಾಗುತ್ತಿದ್ದು ಸಾರ್ವಜನಿಕರು ರಸ್ತೆಯ ಮಧ್ಯೆ ನಡೆಯಬೇಕಾದ ದುಸ್ಥಿತಿ ಎದುರಗಿದೆ. ಕಾರು ಸಹಿತ ನಾಲ್ಕು ಚಕ್ರಗಳ ವಾಹನಗಳು ರಸ್ತೆಯ ಬಹುಪಾಲು ಜಾಗವನ್ನು ಆಕ್ರಮಿಸಿಕೊಳ್ಳುತ್ತಿದ್ದು ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ.

ಚಾಮರಾಜನಗರದಿಂದ ಮೈಸೂರು, ನಂಜನಗೂಡು, ಕೊಳ್ಳೇಗಾಲಕ್ಕೆ ಸಂಪರ್ಕ ಕಲ್ಪಿಸುವ ವಾಹನಗಳು ಸಾಗುವ ಡಿವಿಯೇಷನ್ ರಸ್ತೆಯಲ್ಲಿ ವಾಹನ ನಿಲುಗಡೆಗೆ ಸಮರ್ಪಕ ವ್ಯವಸ್ಥೆ ಇಲ್ಲ. ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಸಂತೇಮರಹಳ್ಳಿ ಸರ್ಕಲ್ವರೆಗೂ ವಾಹನಗಳ ನಿಲುಗಡೆಗೆ ಜಾಗದ ಕೊರತೆ ಇದೆ. ರಸ್ತೆಯ ಬದಿಯಲ್ಲಿರುವ ಗ್ಯಾರೇಜ್ಗಳು, ಮಾಂಸದಂಗಡಿಗಳು, ಹೋಟೆಲ್ಗಳು ಸೇರಿದಂತೆ ವಾಣಿಜ್ಯ ಕೇಂದ್ರಗಳು ಪಾರ್ಕಿಂಗ್ ಜಾಗವನ್ನು ಕಬಳಿಸಿವೆ.

ಚಿಕ್ಕ ಅಂಗಡಿ ಬೀದಿ, ದೊಡ್ಡ ಅಂಗಡಿ ಬೀದಿಯಲ್ಲಿ ಪಾರ್ಕಿಂಗ್ಗೆ ಸ್ಥಳಾವಕಾಶವೇ ಇಲ್ಲ. ಪಾದಚಾರಿ ಮಾರ್ಗ ಹಾಗೂ ಪಾರ್ಕಿಂಗ್ ಜಾಗ ಒತ್ತುವರಿಯಾಗಿ ಉಳಿದಿರುವ ಕಿರಿದಾದ ರಸ್ತೆಯಲ್ಲಿ ವಾಹನ ನಿಲ್ಲಿಸಿದರೆ ಸಂಚಾರ ಸಮಸ್ಯೆ ಉಂಟಾಗುತ್ತದೆ. ಸವಾರರು ವಾಹನ ನಿಲುಗಡೆಗೆ ಸ್ಥಳಾವಕಾಶದ ಕೊರತೆ ಅನುಭವಿಸುತ್ತಿದ್ದರೂ ಸಮಸ್ಯೆ ಬಗೆಹರಿಸಲು ಸಂಬಂಧಪಟ್ಟ ಇಲಾಖೆ ಆಸಕ್ತಿ ತೋರದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಬಸ್ ನಿಲ್ದಾಣವೇ ಪಾರ್ಕಿಂಗ್ ಸ್ಥಳ: ಯಳಂದೂರು ಪಟ್ಟಣದ ನಡುವೆ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಆದರೆ, ವಾಹನಗಳ ನಿಲುಗಡೆಗೆ ಸ್ಥಳಾವಕಾಶ ಇಲ್ಲದೆ ಬಸ್ ನಿಲ್ದಾಣ ಹಾಗೂ ರಸ್ತೆಗಳ ಬದಿಗಳಲ್ಲಿಯೇ ದ್ವಿಚಕ್ರ ವಾಹನ ಹಾಗೂ ಕಾರುಗಳನ್ನು ನಿಲ್ಲಿಸಬೇಕಾಗಿದೆ. ಪರಿಣಾಮ ಪ್ರಯಾಣಿಕರು ಹಾಗೂ ಪಾದಚಾರಿಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಹಬ್ಬ ಸೇರಿದಂತೆ ವಾರಾಂತ್ಯದ ದಿನಗಳಲ್ಲಿ ವಾಹನಗಳು ಬಸ್ ನಿಲ್ದಾಣದಲ್ಲಿ ಆಶ್ರಯ ಪಡೆಯುವಯುದರಿಂದ ಬಸ್ಗಳ ಸುಗಮ ಸಂಚಾರಕ್ಕೂ ದುಸ್ತರವಾಗಿದೆ ಎಂದು ಸಾರ್ವಜನಿಕ ದೂರುತ್ತಾರೆ.

ಕೊಳ್ಳೇಗಾಲ ನಗರದ ಪ್ರಮುಖ ರಸ್ತೆಗಳಲ್ಲಿ ಅಡ್ಡಾದಿಡ್ಡಿ ಪಾರ್ಕಿಂಗ್ ಮಾಡುತ್ತಿರುವುದರಿಂದ ಸಾರ್ವಜನಿಕರು ಪ್ರತಿನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆಯ ಎರಡು ಬದಿ ವಾಹನ ನಿಲ್ಲಿಸುವುದರಿಂದ ಸಂಚಾರ ಕಿರಿಕಿರಿ ಉಂಟಾಗುತ್ತಿದ್ದು ನಗರಸಭೆ ಅಧಿಕಾರಿಗಳಾಗಲಿ ಅಥವಾ ಪೊಲೀಸ್ ಇಲಾಖೆಯಾಗಲಿ ಸಮಸ್ಯೆ ಬಗೆಹರಿಸಲು ಗಮನ ಹರಿಸುತ್ತಿಲ್ಲ ಎಂದು ಸಾರ್ವಜನಿಕರು ದೂರುತ್ತಾರೆ.

ಸಾರ್ವಜನಿಕರು ಹಲವು ಬಾರಿ ವಾಹನಗಳ ನಿಲುಗಡೆಗೆ ಸ್ಥಳಾವಕಾಶ ಕಲ್ಪಿಸುವಂತೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಪರಿಣಾಮ ಜಾಗ ಸಿಕ್ಕ ಕಡೆಗಳಲ್ಲಿ ವಾಹನ ನಿಲುಗಡೆ ಮಾಡುತ್ತಿರುವುದರಿಂದ ಸಮಸ್ಯೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಕಿರಿದಾದ ರಸ್ತೆಗಳ ಬಹುಪಾಲು ಜಾಗ ವಾಹನಗಳ ನಿಲುಗಡೆಗೆ ಬಳಕೆಯಾಗುತ್ತಿದ್ದು ಪಾದಚಾರಿಗಳು ಜೀವಪಣಕ್ಕಿಟ್ಟು ರಸ್ಯೆಯ ಮೇಲೆ ಓಡಾಡಬೇಕಾಗಿದೆ.

ಡಾ.ಬಿ.ಆರ್ ಅಂಬೇಡ್ಕರ್ ರಸ್ತೆ, ಡಾ. ರಾಜಕುಮಾರ್ ರಸ್ತೆ, ಡಾ.ವಿಷ್ಣುವರ್ಧನ್ ರಸ್ತೆ, ಹಳೆ ನಗರಸಭೆ ರಸ್ತೆ, ಚಿನ್ನದ ಅಂಗಡಿ ಬೀದಿ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ವಾಹನಗಳ ನಿಲುಗಡೆ ಸಮಸ್ಯೆ ಹೆಚ್ಚಾಗಿದೆ. ಪಾರ್ಕಿಂಗ್ ಸ್ಥಳಾವಕಾಶ ಕಲ್ಪಿಸುವ ಬಗ್ಗೆ ಅಧಿಕಾರಿಗಳು ತಲೆಕೆಡಿಸಿಕೊಳ್ಳುತ್ತಿಲ್ಲ.

ಗುಂಡ್ಲುಪೇಟೆ ತಾಲ್ಲೂಕು ಕೇಂದ್ರದಲ್ಲಿ ಎರಡು ರಾಷ್ಟ್ರೀಯ ಹೆದ್ದಾರಿಗಳು ಹಾದುಹೋಗಿದ್ದು ಅತಿ ಹೆಚ್ಚು ವಾಹನಗಳ ದಟ್ಟಣೆ ಇದೆ. ಆದರೆ ಪಟ್ಟಣದಲ್ಲಿ ಸಂಚಾರಿ ನಿಯಮಗಳನ್ನು ಸರಿಯಾಗಿ ಪಾಲಿಸದೆ ಸಮಸ್ಯೆ ಹೆಚ್ಚಾಗಿದೆ. ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಚಾಮರಾಜನಗರ ರಸ್ತೆ, ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯಲ್ಲಿ ದ್ವಿಚಕ್ರ ವಾಹನಗಳು ಹಾಗೂ ಕಾರುಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುತ್ತಿರುವುದರಿಂದ ತೊಂದರೆಯಾಗಿದೆ.

ಪಟ್ಟಣದ ಅಂಗಡಿ ಮಳಿಗೆಗಳ ಮಾಲೀಕರು ಫುಟ್ಪಾತ್ಗಳನ್ನು ಒತ್ತುವರಿ ಮಾಡಿಕೊಂಡಿದ್ದು, ವಾಹನಗಳ ನಿಲುಗಡೆಗೆ ಜಾಗವೇ ಇಲ್ಲದಂತಾಗಿದೆ ಎಂದು ಪಟ್ಟಣದ ವ್ಯಾಪಾರಿ ಕುಮಾರ್ ದೂರುತ್ತಾರೆ.

ನಿರ್ವಹಣೆ: ಬಾಲಚಂದ್ರ ಎಚ್.

ಪೂರಕ ಮಾಹಿತಿ: ಅವಿನ್ ಪ್ರಕಾಶ್ ವಿ, ನಾ.ಮಂಜುನಾಥಸ್ವಾಮಿ, ಮಲ್ಲೇಶ, ಮಹದೇವ್ ಹೆಗ್ಗವಾಡಿಪುರ

ಪಾರ್ಕಿಂಗ್ ತೆರವಿಗೆ ಕ್ರಮ ಪಾರ್ಕಿಂಗ್ ಒತ್ತುವರಿಯಾಗಿರುವ ಸ್ಥಳಗಳನ್ನು ಗುರುತಿಸಿ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಪೊಲೀಸ್ ಇಲಾಖೆ ಪಾರ್ಕಿಂಗ್ ಅಗತ್ಯವಿರುವೆಡೆ ಸ್ಥಳ ಗುರುತಿಸಿಕೊಟ್ಟರೆ ಮಾರ್ಕಿಂಗ್ ಮಾಡಿಕೊಡಲಾಗುವುದು. ಎಸ್.ಎ.ರಾಮದಾಸ್ ಚಾ.ನಗರ ಪೌರಾಯುಕ್ತ ಅಗತ್ಯ ಕ್ರಮ ಬಸ್ ನಿಲ್ದಾಣ ಹಾಗೂ ಪಾದಚಾರಿ ಮಾರ್ಗದಲ್ಲಿ ದ್ವಿಚಕ್ರ ವಾಹನ ನಿಲ್ಲಿಸದಂತೆ ಸವಾರರಲ್ಲಿ ಜಾಗೃತಿ ಮೂಡಿಸಲಾಗಿದೆ. ಸಾರಿಗೆ ಸಂಸ್ಥೆಯ ಅಧಿಕಾರಿಗಳು ಹಾಗೂ ಪೊಲೀಸರಿಗೂ ಕ್ರಮ ಕೈಗೊಳ್ಳುವಂತೆ ತಿಳಸಲಾಗಿದೆ. ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸಿ ವಾಹನಗಳ ನಿಲುಗಡೆಗೆ ಸ್ಥಳಾವಕಾಶ ಒದಗಿಸಲಾಗುವುದು.

ಮಹೇಶ್ ಕುಮಾರ್ ಮುಖ್ಯಾಧಿಕಾರಿ ಪಟ್ಟಣ ಪಂಚಾಯತಿ ಯಳಂದೂರು

‘ಭವಿಷ್ಯದ ದೃಷ್ಟಿಯಿಂದ ಯೋಚಿಸಿ’ ಚಾಮರಾಜನಗರ ಜಿಲ್ಲಾ ಕೇಂದ್ರದ ರಸ್ತೆಗಳ ವಿಸ್ತರಣೆ ಸಂದರ್ಭ ಭವಿಷ್ಯದ ದೃಷ್ಟಿಯನ್ನಿಟ್ಟುಕೊಂಡು ವಾಹನಗಳ ನಿಲುಗಡೆಗೆ ಪಾದಚಾರಿಗಳ ಸಂಚಾರಕ್ಕೆ ಜಾಗ ಮೀಸಲಿಟ್ಟು ರಸ್ತೆ ನಿರ್ಮಾಣ ಮಾಡಬೇಕು. ಈ ಬಗ್ಗೆ ಅಧಿಕಾರಿ ವರ್ಗ ಮತ್ತು ಜನಪ್ರತಿನಿಧಿಗಳು ಯೋಜಿಸಬೇಕು. ನಗರದಲ್ಲಿ ವ್ಯವಸ್ಥಿತ ಪಾರ್ಕಿಂಗ್ ಇಲ್ಲದೆ ರಸ್ತೆಗಳ ಬದಿ ಎಲ್ಲೆಂದರಲ್ಲಿ ವಾಹನಗಳನ್ನು ನಿಲುಗಡೆ ಮಾಡಲಾಗುತ್ತಿದ್ದು ಸವಾರರಿಗೆ ತೊಂದರೆಯಾಗಿದೆ. ಬೃಹತ್ ನಗರಗಳಲ್ಲಿ ವಾಹನಗಳ ನಿಲುಗಡೆಗೆ ಸ್ಥಳೀಯ ಸಂಸ್ಥೆಗಳು ಬಹುಮಹಡಿ ಕಟ್ಟಡಗಳನ್ನು ನಿರ್ಮಿಸಿ ಕನಿಷ್ಠ ಶುಲ್ಕ ವಸೂಲಿ ಮಾಡಿ ಅನುಕೂಲ ಮಾಡಿಕೊಟ್ಟಿದ್ದು ನಗರದಲ್ಲೂ ಅಂತಹ ವ್ಯವಸ್ಥೆ ಜಾರಿಗೆ ಬಂದರೆ ಸವಾರರಿಗೂ ಹಾಗೂ ನಗರಸಭೆಗೂ ಆದಾಯ ಬರಲಿದೆ. '

ಭಾನುಪ್ರಕಾಶ್ ಸಾಮಾಜಿಕ ಹೋರಾಟಗಾರ

‘ದಂಡವೇ ಪರಿಹಾರವಲ್ಲ’ ವಾಹನ ನಿಲುಗಡೆಗೆ ಸಮರ್ಪಕ ವ್ಯವಸ್ಥೆ ಮಾಡುವ ಬದಲು ಸಾರ್ವಜನಿಕರಿಗೆ ದಂಡ ವಿಧಿಸುವುದು ಸರಿಯಲ್ಲ. ಮೂಲಸೌಕರ್ಯ ನೀಡುವಂತೆ ಪ್ರಶ್ನೆ ಮಾಡದ ಸಾರ್ವಜನಿಕರ ಅಸಹಾಯಕತೆಯನ್ನು ಬಂಡವಾಳ ಮಾಡಿಕೊಳ್ಳುವುದು ಸರಿಯಲ್ಲ. ಇನ್ನಾದರೂ ಅಧಿಕಾರಿ ವರ್ಗ ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ವಾಹನಗಳ ನಿಲುಗಡೆಗೆ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು. ಪ್ರಿಯಾಂಕಾ ಚಾ.ನಗರ ನಿವಾಸಿ ‘ಸುಗಮ ಸಂಚಾರಕ್ಕೆ ಅನುವುಮಾಡಿ’ ಸವಾರರು ಮನಸ್ಸಿಗೆ ಬಂದಂತೆ ವಾಹನಗಳನ್ನು ರಸ್ತೆಯ ಮಧ್ಯೆ ನಿಲ್ಲಿಸುತ್ತಿರುವುದರಿಂದ ದಟ್ಟಣೆ ಹೆಚ್ಚಾಗಿದೆ. ಪಾದಚಾರಿಗಳಿಗೆ ತೊಂದರೆ ಉಂಟಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಬೇಕು.

-ಅಕ್ಷಯ್ ಕೊಳ್ಳೇಗಾಲ

ಅಪಘಾತಗಳು ಹೆಚ್ಚಳ ವಾಹನಗಳ ನಿಲುಗಡೆಗೆ ಸಮರ್ಪಕ ಜಾಗವಿಲ್ಲದೆ ಸವಾರರು ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ರಸ್ತೆಯ ಬಹುಪಾಲು ಪಾರ್ಕಿಂಗ್ಗೆ ಅತಿಕ್ರಮವಾಗಿರುವ ಪರಿಣಾಮ ಅಪಘಾತಗಳು ಹೆಚ್ಚಾಗುತ್ತಿವೆ. ಸ್ಥಳೀಯ ಆಡಳಿತ ವಾಹನಗಳ ನಿಲುಗಡೆಗೆ ಜಾಗದ ಸೂಕ್ತ ಜಾಗದ ವ್ಯವಸ್ಥೆ ಮಾಡಬೇಕು. –ಶಿವಣ್ಣ ಉಮ್ಮತ್ತೂರು ಕ್ರಮ ವಹಿಸುತ್ತಿಲ್ಲ ಯಳಂದೂರು ಪಟ್ಟಣದಲ್ಲಿರುವ ರಸ್ತೆಗಳಲ್ಲಿ ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡು ವಾಹನಗಳ ನಿಲುಗಡೆ ಮಾಡಲಾಗುತ್ತಿದ್ದು ಸಾರ್ವಜನಿಕರು ರಸ್ತೆಯ ಮಧ್ಯೆ ಸಂಚರಿಸಬೇಕಾಗಿದೆ. ಇದರಿಂದ ಅಪಘಾತಗಳಿಗೆ ಬಲಿಯಾಗುವ ಆತಂಕ ಎದುರಾಗಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಹಾಗೂ ಪಟ್ಟಣ ಪಂಚಾಯಿತಿ ಕ್ರಮ ವಹಿಸಲಿ.

-ಮಹೇಶ್ ಪ್ರಿನ್ಸ್ ಯಳಂದೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.