ಚಾಮರಾಜನಗರ: ಸರ್ವರ ಸಹಕಾರದೊಂದಿಗೆ ಜಿಲ್ಲಾಡಳಿತದ ವತಿಯಿಂದ ನ.1ರಂದು ನಗರದಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅಧ್ಯಕ್ಷತೆಯಲ್ಲಿ ನಡೆದ ವಿವಿಧ ಸಂಘ ಸಂಸ್ಥೆಗಳು, ಕಲಾವಿದರು, ಅಧಿಕಾರಿಗಳ ಹಾಗೂ ಮುಖಂಡರ ಸಭೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.

ಮುಖಂಡರೊಬ್ಬರು ಮಾತನಾಡಿ, ಜಿಲ್ಲೆಯಾದ್ಯಂತ ಕನ್ನಡ ರಾಜ್ಯೋತ್ಸವ ಆಚರಣೆಯಾಗಬೇಕು, ಎಲ್ಲ ಕಚೇರಿ, ಬ್ಯಾಂಕ್ ಹಾಗೂ ಗ್ರಾಮ ಪಂಚಾಯಿತಿ ಕಚೇರಿಗಳು, ಗಡಿಭಾಗಗಳಲ್ಲಿ ರಾಜ್ಯೋತ್ಸವ ಆಚರಣೆಯಾಗಬೇಕು, ಶಾಲೆಗಳಲ್ಲಿ ಕನ್ನಡ ಜಾಗೃತಿ ಕಾರ್ಯಕ್ರಮ ಆಯೋಜಿಸಬೇಕು, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಸಾಧಕರನ್ನು ಗೌರವಿಸಬೇಕು ಎಂದು ಸಲಹೆ ನೀಡಿದರು.

ರಾಷ್ಟ್ರಕವಿ ಕುವೆಂಪು ರಚಿಸಿರುವ ನಾಡಗೀತೆಗೆ 100 ವರ್ಷಗಳು ಸಂದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಂದ ಸಾಮೂಹಿಕ ನಾಡಗೀತೆ ಹಾಡಿಸಲು ಕ್ರಮ ಕೈಗೊಳ್ಳಬೇಕು, ಸಂಜೆ ನಾಡು ನುಡಿ ಕುರಿತ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು.

ಬ್ಯಾಂಕ್ಗಳಲ್ಲಿ ಕನ್ನಡ ಭಾಷೆಯಲ್ಲಿಯೇ ವ್ಯವಹರಿಸುವಂತೆ ಸುತ್ತೋಲೆ ಹೊರಡಿಸಬೇಕು, ಕನ್ನಡ ಬಾರದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕನ್ನಡ ಭಾಷೆ ಕಲಿಕೆಯ ತರಬೇತಿ ನೀಡಬೇಕು, ಕನ್ನಡ ಭಾಷೆಯಲ್ಲಿ ಎದ್ದು ಕಾಣುವಂತೆ ಫಲಕಗಳನ್ನು ಅಳವಡಿಸಬೇಕು ಎಂದು ಕನ್ನಡಪರ ಸಂಘಟನೆಗಳ ಮುಖಂಡರು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾತನಾಡಿ, ಜಿಲ್ಲಾಡಳಿತದಿಂದ ಅಚ್ಚುಕಟ್ಟಾಗಿ ಕನ್ನಡ ರಾಜ್ಯೋತ್ಸವ ಅಚರಿಸಲು ಎಲ್ಲ ಸಿದ್ದತೆ ಮಾಡಿಕೊಳ್ಳಲಾಗುತ್ತದೆ. ಈ ಸಂಬಂಧ ವಿವಿಧ ಸಮಿತಿಗಳಿಗೆ ಜವಾಬ್ದಾರಿ ವಹಿಸಲಾಗುತ್ತಿದೆ. ನಗರದ ಡಾ.ಬಿ.ಅರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಸಬೇಕು, ಕನ್ನಡ ನಾಡು, ನುಡಿ ಅಭಿಮಾನದ ಕಾರ್ಯಕ್ರಮಗಳನ್ನು ಶಾಲಾ ಮಕ್ಕಳಿಂದ ಏರ್ಪಾಡು ಮಾಡಬೇಕು, ಕನಿಷ್ಠ 250 ವಿದ್ಯಾರ್ಥಿಗಳಿಂದ ಸಾಮೂಹಿಕ ನಾಡಗೀತೆ ಹಾಡಿಸಲು ಡಿಡಿಪಿಐ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಾಲೀಮು ಆರಂಭಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿಸಿ ಸಿಇಒ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜು, ಮುಖಂಡರಾದ ಚಾ.ರಂ. ಶ್ರೀನಿವಾಸಗೌಡ, ಸುರೇಶ್ ನಾಯಕ, ಮಹದೇವಶೆಟ್ಟಿ, ಅರಕಲವಾಡಿ ನಾಗೇಂದ್ರ, ಚಾ.ಗು.ನಾಗರಾಜು, ಸಿ.ಎಂ.ಕೃಷ್ಣಮೂರ್ತಿ, ಸುರೇಶ್ ವಾಜಪೇಯಿ, ಸಿ.ಎಂ.ನರಸಿಂಹಮೂರ್ತಿ, ಜಿ.ಬಂಗಾರು, ಪಣ್ಯದಹುಂಡಿ ರಾಜು, ಮಹೇಶ್, ಶಿವಶಂಕರ್, ನಟರಾಜು, ಶಿವಣ್ಣ, ಜ. ಸುರೇಶ್ ನಾಗ್, ಬ್ಯಾಡಮೂಡ್ಲು ಬಸವಣ್ಣ, ಮಹದೇವಸ್ವಾಮಿ, ಬಂಗಾರನಾಯಕ, ಸಿದ್ದರಾಜು, ಎಲ್. ಸುರೇಶ್, ಹೊಸೂರು ಶಿವಣ್ಣ ಸಭೆಯಲ್ಲಿ ಇದ್ದರು.

ಗಡಿಭಾಗದಲ್ಲಿ ಕನ್ನಡ ಡಿಂಡಿಮ

ನವೆಂಬರ್ನಲ್ಲಿ ಒಂದು ದಿನ ಗಡಿ ಭಾಗದ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ತಹಶೀಲ್ದಾರ್ ತಾಲ್ಲೂಕು ಪಂಚಾಯಿತಿ ಇಒ ಕ್ರಮ ತೆಗೆದುಕೊಳ್ಳಬೇಕು. ಜಿಲ್ಲೆಯ ಸಾಧಕರನ್ನು ಗುರುತಿಸಿ ಗೌರವಿಸಬೇಕು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕನ್ನಡ ಭಾಷೆಯಲ್ಲಿಯೇ ಪ್ರಧಾನವಾಗಿ ನಾಮಫಲಕ ಅಳವಡಿಕೆಯ ಬಗ್ಗೆ ಪರಿಶೀಲಿಸಿ ಕ್ರಮ ಜರುಗಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು. ಬ್ಯಾಂಕುಗಳಲ್ಲಿ ಕನ್ನಡೇತರ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕನ್ನಡ ಕಲಿಕೆಯ ಬಗ್ಗೆ ತರಬೇತಿ ನೀಡಿ ಆನ್ಲೈನ್ ಮೂಲಕವೂ ತರಬೇತಿ ಮುಂದುವರಿಸಿ ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.