ಚಾಮರಾಜನಗರ: ಕಳೆದ ಮೂರು ವರ್ಷಗಳಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರ್ಕಾರ ₹ 560 ಕೋಟಿಯಷ್ಟು ಅನುದಾನ ಮಂಜೂರಾಗಿದ್ದು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ತಿಳಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಮಂಗಳವಾರ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು ‘ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಕೊಳ್ಳೇಗಾಲ, ಯಳಂದೂರು ಹಾಗೂ ಭಾಗಶಃ ಚಾಮರಾನಗರ ತಾಲ್ಲೂಕಿನಲ್ಲಿ ಆರೋಗ್ಯ, ಶಿಕ್ಷಣ, ನೀರಾವರಿ, ಕುಡಿಯುವ ನೀರು, ಒಳ ಚರಂಡಿ, ಕೆರೆ ಹಾಗೂ ರಸ್ತೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಅಗತ್ಯ ಅನುದಾನ ನೀಡಿದ್ದು ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗಿವೆ ಎಂದರು.

ಯಳಂದೂರು ತಾಲ್ಲೂಕಿನಲ್ಲಿ ₹ 33 ಕೋಟಿ ವೆಚ್ಚದಲ್ಲಿ 100 ಬೆಡ್ಗಳ ಸಾಮರ್ಥ್ಯದ ಆಸ್ಪತ್ರೆ ಶೀಘ್ರ ಉದ್ಘಾಟನೆಯಾಗಲಿದೆ, ಹೆಚ್ಚುವರಿಯಾಗಿ ಕೊಳ್ಳೇಗಾಲ ಉಪ ವಿಭಾಗದಲ್ಲಿ 250 ಬೆಡ್ಗಳ ಸಾಮರ್ಥ್ಯದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣವಾಗಲಿದೆ, ಮೊದಲ ಹಂತದಲ್ಲಿ 100 ಬೆಡ್ಗಳ ಆಸ್ಪತ್ರೆಗೆ ₹ 48 ಕೋಟಿ ಮಂಜೂರಾಗಿದೆ ಎಂದು ಮಾಹಿತಿ ನೀಡಿದರು.

ಕಳೆದ ವರ್ಷ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಜಿಲ್ಲೆಯ ಹಾಗೂ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಹಲವು ಕಾಮಗಾರಿಗಳನ್ನು ಮಂಜೂರು ಮಾಡಲಾಗಿದೆ. ಇನ್ನುಳಿದ ಎರಡು ವರ್ಷಗಳಲ್ಲಿ ಕೊಳ್ಳೇಗಾಲವನ್ನು ಮಾದರಿ ಕ್ಷೇತ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಭರವಸೆ ನೀಡಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯದ ಬೊಕ್ಕಸ ಖಾಲಿಯಾಗಿದೆ ಎಂಬ ವಿರೋಧ ಪಕ್ಷಗಳ ಟೀಕೆಗಳಿಗೆ ಕ್ಷೇತ್ರದಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳೇ ಉತ್ತರವಾಗಿವೆ. ಮುಡಿಗುಂಡದಲ್ಲಿ ಹಳೆ ಸೇತುವೆಗೆ ಪರ್ಯಾಯವಾಗಿ 15 ಕೋಟಿ ವೆಚ್ಚದಲ್ಲಿ ಹೊಸ ಸೇತುವೆ, ಹೊಂಗನೂರು ಹಿರಿಕೆರೆ ನೀರಾವರಿಗೆ ₹ 14.8 ಕೋಟಿ ಮಂಜೂರಾಗಿದೆ ಎಂದು ಶಾಸಕರು ತಿಳಿಸಿದರು.

ಸಂತೆಮರಹಳ್ಳಿಯ ಎಪಿಎಂಸಿ ಮಾರುಕಟ್ಟೆಯಲ್ಲಿ ₹ 5 ಕೋಟಿ ವೆಚ್ಚದಲ್ಲಿ ಎಳನೀರು ಮಾರುಕಟ್ಟೆ ನಿರ್ಮಾಣವಾಗಲಿದೆ, ಕುದೇರು, ಗೌಡಹಳ್ಳಿ, ಗೂಳೀಪುರ ಗ್ರಾಮಗಳಲ್ಲಿ ಹೊಸ ಪಶು ಆಸ್ಪತ್ರೆ ತೆರೆಯಲಾಗುವುದು. ಯಳಂದೂರಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡ ನಿರ್ಮಾಣಕ್ಕೆ ₹ 2.5 ಕೋಟಿ ಅನುದಾನ ಮಂಜೂರಾಗಿದೆ ಎಂದರು.

ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳವಾಗಿರುವ ಬಿಳಿಗಿರಿರಂಗನಬೆಟ್ಟದಲ್ಲಿ ಬಸ್ ನಿಲ್ದಾಣ, ದಾಸೋಹ ಭವನ, ಪ್ರವಾಸಿ ಸ್ಥಳ ಅಭಿವೃದ್ಧಿಗೆ ₹ 5.75 ಕೋಟಿ ಪ್ರಸ್ತಾವ ಸಲ್ಲಿಸಲಾಗಿದೆ. ಸಂತೆಮರಹಳ್ಳಿಯಲ್ಲಿ ಬಿಲ್ವಿದ್ಯೆ ಶಾಲೆ ಅಭಿವೃದ್ಧಿಗೆ ₹ 2 ಕೋಟಿ ಮಂಜೂರಾಗಿದೆ, ಮದ್ದೂರು ಗ್ರಾಮದಲ್ಲಿ 4 ಕೋಟಿ ವೆಚ್ಚದಲ್ಲಿ ಸೇತುವೆ, ಕುದೇರು-ಉಮ್ಮತ್ತೂರು ನಡುವಿನ ಅಡ್ಡಹಳ್ಳಗಳಿಗೆ ಎರಡು ಕಡೆ ಸೇತುವೆ ನಿರ್ಮಿಸಲು 9 ಕೋಟಿ, ಕಾವುದವಾಡಿ ಬಳಿ ಸೇತುವೆ ನಿರ್ಮಾಣಕ್ಕೆ ₹3 ಕೋಟಿ ಹಾಗೂ 1.5 ಕೋಟಿ ವೆಚ್ಚದಲ್ಲಿ ಕಂದಹಳ್ಳಿ, ಹೊಮ್ಮ, ಆಲೂರು ರಸ್ತೆ ನಿರ್ಮಾಣವಾಗುತ್ತಿದೆ ಎಂದು ಶಾಸಕ ಎಆರ್ಕೆ ತಿಳಿಸಿದರು.

50 ಶಾಲೆಗಳಲ್ಲಿ ತಲಾ ಒಂದು ಲಕ್ಷ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಕೊಳ್ಳೇಗಾಲದಲ್ಲಿ ಸುವರ್ಣ ಕನ್ನಡ ಭವನ ನಿರ್ಮಾಣಮ, ಸ್ತ್ರೀಶಕ್ತಿ ಭವನ, ಉಪ್ಪಾರ, ಲಿಂಗಾಯತ, ಕುರುಬ ಸಮುದಾಯಗಳು ವಾಸವಿರುವ ಕಾಲೋನಿಗಳಲ್ಲಿ ರಸ್ತೆ ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆರ್.ಎನ್. ಸಿದ್ದಲಿಂಗಸ್ವಾಮಿ, ಪ್ರಧಾನ ಕಾರ್ಯದರ್ಶಿ ಪ್ರಸಾದ್ ಲಕ್ಕೂರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-37-1096821001

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.