ಚಾಮರಾಜನಗರ: ‘ಸಚಿವ ಸ್ಥಾನ ಸಿಗದಿರುವುದಕ್ಕೆ ಬೇಸರಗೊಂಡಿರುವ ಚಾಮರಾಜನಗರ ಶಾಸಕ ಸಿ. ಪುಟ್ಟರಂಗಶೆಟ್ಟಿ, ವಿಧಾನಸಭೆಯ ಉಪ ಸಭಾಧ್ಯಕ್ಷ ಸ್ಥಾನ ಒಪ್ಪಿಕೊಳ್ಳುವುದಿಲ್ಲ’ ಎಂದು ಭಾನುವಾರ ಹೇಳಿದ್ದಾರೆ.

ಜಿಲ್ಲೆಯ ಯಳಂದೂರು ತಾಲ್ಲೂಕಿನ ಉಪ್ಪಿನಮೋಳೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, ‘ನಾನು ಆ ಸ್ಥಾನವನ್ನು ಒಪ್ಪಿಕೊಳ್ಳುವುದಿಲ್ಲ. ಒಪ್ಪದಂತೆ ಬೆಂಬಲಿಗರು, ಕಾರ್ಯಕರ್ತರೂ ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ’ ಎಂದರು.

‘ಉಪ ಸಭಾಧ್ಯಕ್ಷನಾದರೆ ಕ್ಷೇತ್ರದ ಜೊತೆಗಿನ ಸಂಪರ್ಕ ಕಡಿತವಾಗುತ್ತದೆ. ಮತದಾರರ ಬಳಿಗೆ ಹೋಗಲು ಸಾಧ್ಯವಾಗುವುದಿಲ್ಲ. ನನಗೆ ಈ ಹುದ್ದೆ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದೇನೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.