ಸೋಮವಾರ, 25 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ಹಿತದೃಷ್ಟಿಯಿಂದ ಮೋದಿ ಮತ್ತೆ ಪ್ರಧಾನಿಯಾಗಬೇಕು: ರಾಜೇಂದ್ರ

Published 31 ಜುಲೈ 2023, 7:31 IST
Last Updated 31 ಜುಲೈ 2023, 7:31 IST
ಅಕ್ಷರ ಗಾತ್ರ

ಚಾಮರಾಜನಗರ: ‘ದೇಶದ ಹಿತದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು. 2024ರಲ್ಲಿ ಮೋದಿಯವರು ಗೆಲ್ಲಬೇಕು ಎಂಬ ಸಂಕಲ್ಪದೊಂದಿಗೆ ನಮ್ಮ ಸಂಸ್ಥೆ ಕೆಲಸ ಮಾಡುತ್ತಿದೆ’ ಎಂದು ಮಿಷನ್‌ ಮೋದಿ ಸಂಘಟನೆಯ ಮೈಸೂರು ವಿಭಾಗೀಯ ಅಧ್ಯಕ್ಷ ರಾಜೇಂದ್ರ ಭಾನುವಾರ ಹೇಳಿದರು. 

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ‘ ಡೆಮಾಕ್ರಸಿ ಡೆವೆಲಪ್‌ಮೆಂಟ್‌ ಟ್ರಸ್ಟ್‌ ಎಂಬ ಸಂಸ್ಥೆಯ ಅಡಿಯಲ್ಲಿ ಮಿಷನ್‌ ಮೋದಿ ಸಂಘಟನೆ ಕೆಲಸ ಮಾಡುತ್ತಿದೆ. ಸೇವಾ ಉದ್ದೇಶದಿಂದ ರಚನೆಮಾಡಲಾಗಿರುವ ಸಂಸ್ಥೆ ಇದು. ಯಾವುದೇ ರಾಜಕೀಯ ಪಕ್ಷಗಳಿಗೆ ಸೇರಿಲ್ಲ. ಎಲ್ಲ ರಾಜ್ಯಗಳಲ್ಲಿ ಇದು ಕಾರ್ಯಾಚರಿಸುತ್ತಿದ್ದು,  ಗುಜರಾತ್‌ನಲ್ಲಿ ಹೆಚ್ಚು ಸಕ್ರಿಯವಾಗಿದೆ’ ಎಂದರು. 

‘ಟ್ರಸ್ಟ್‌ ನಮ್ಮ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಕೆಲಸ ಮಾಡುತ್ತಿದೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳನ್ನು ತಳಮಟ್ಟದಲ್ಲಿ ಜನರಿಗೆ ತಲುಪಿಸುವ ಕೆಲಸವನ್ನು ನಮ್ಮ ಸದಸ್ಯರು ಮಾಡುತ್ತಿದ್ದಾರೆ. ಗ್ರಾಮೀಣಾಭಿವೃದ್ಧಿಯ ಉದ್ದೇಶ ಇಟ್ಟುಕೊಂಡು ನಾವು ಕೆಲಸ ಮಾಡುತ್ತೇವೆ’ ಎಂದರು.

‘ಮಿಷನ್‌ ಮೋದಿ ಎಂಬುದು ತಾತ್ಕಾಲಿಕ ತಾತ್ಕಾಲಿಕ. ಲೋಕಸಭಾ ಚುನಾವಣೆಯವರೆಗೆ ಇದು ನಡೆಯುತ್ತದೆ. ಮೋದಿಯವರು ಮತ್ತೆ ಪ್ರಧಾನಿಯಾಗಬೇಕು ಎಂಬ ಸಂಕಲ್ಪದಿಂದ ನಮ್ಮ ಸದಸ್ಯರು ಕೆಲಸ ಮಾಡಲಿದ್ದಾರೆ. ಕೇಂದ್ರ ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಮಟ್ಟದಲ್ಲಿ ಜನರಿಗೆ ತಿಳಿಸಲಾಗುವುದು. ಸರ್ಕಾರದ ನಿರ್ಧಾರಗಳಿಂದ ಆಗಿರುವ ಪ್ರಯೋಜನಗಳನ್ನು ವಿವರಿಸಲಾಗುವುದು’ ಎಂದು ರಾಜೇಂದ್ರ ಹೇಳಿದರು. 

ಮಿಷನ್‌ ಮೋದಿ ಚಾಮರಾಜನಗರ ಜಿಲ್ಲಾ ಕಾರ್ಯಕಾರಿಣಿ ಜಿಲ್ಲಾಧ್ಯಕ್ಷ ಕೆ.ಪಿ.ವೃಷಬೇಂದ್ರಸ್ವಾಮಿ, ಸಂಯೋಜಕ ರಾಮಕೃಷ್ಣ, ಉಪಾಧ್ಯಕ್ಷ ಶಿವರುದ್ರಸ್ವಾಮಿ, ಕಾರ್ಯದರ್ಶಿ ಗುರುಪ್ರಸಾದ್‌ ಇದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT