ಚಾಮರಾಜನಗರ: ಐದು ವರ್ಷಗಳ ಹಿಂದೆ ಕೋವಿಡ್ ಸಂದರ್ಭದಲ್ಲಿ ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಮೃತಪಟ್ಟವರ ಕುಟುಂಬಗಳ ಸದಸ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಿ ಹುದ್ದೆಗಳ ನೇಮಕಾತಿ ಪತ್ರ ವಿತರಿಸಿದರು.

ಗುಂಡ್ಲುಪೇಟೆಯ ದೇವರಾಜ ಅರಸು ಕ್ರೀಡಾಂಗಣದಲ್ಲಿ ಮಂಗಳವಾರ ತಾಲ್ಲೂಕಿನ ೧೧೦ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ 25 ಮಂದಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರ ಮಾಡಿದರು.

ಸಂತ್ರಸ್ತರಿಗೆ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಬೋಧನಾ ಆಸ್ಪತ್ರೆಯಲ್ಲಿ (ಸಿಮ್ಸ್) ವಿವಿಧ ವೃಂದದ ಉದ್ಯೋಗಗಳನ್ನು ನೀಡಲಾಗಿದೆ.

2021, ಮೇ 2ರಂದು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ 34 ಮಂದಿ ಆಮ್ಲಜನಕ ಸಿಗದೆ ಧಾರುಣವಾಗಿ ಮೃತಪಟ್ಟಿದ್ದರು. ದುರ್ಘಟನೆ ನಡೆದಾಗ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು.

ಭಾರತ್ ಜೋಡೋ ಪಾದಯಾತ್ರೆಯ ಸಂದರ್ಭ ರಾಹುಲ್ ಗಾಂಧಿ ಹಾಗೂ ಡಿ.ಕೆ.ಶಿವಕುಮಾರ್ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರನ್ನು ಭೇಟಿಮಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಸರ್ಕಾರಿ ಉದ್ಯೋಗ ನೀಡುವ ಭರವಸೆ ನೀಡಿದ್ದರು.

ಬಳಿಕ ಸಂತ್ರಸ್ತರು ಸರ್ಕಾರಿ ಉದ್ಯೋಗಕ್ಕಾಗಿ ನಿರಂತರ ಹೋರಾಟ ನಡೆಸಿಕೊಂಡು ಬಂದಿದ್ದರು. ಅಂತಿಮವಾಗಿ ಸಂತ್ರಸ್ತರ ಬೇಡಿಕೆ ಈಡೇರಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಕಾತಿ ಪತ್ರಗಳನ್ನು ನೀಡಿದ್ದಾರೆ.
.ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿ ಕೇಂದ್ರದಿಂದ ಇ.ಡಿ ದಾಳಿ: ಸಿದ್ದರಾಮಯ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.