ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಾಮರಾಜನಗರ | ಪೆಟ್ರೋಲ್ ಡೀಸೆಲೆ ಬೆಲೆ ಹೆಚ್ಚಳ; ಬಿಜೆಪಿ ಪ್ರತಿಭಟನೆ

Published 17 ಜೂನ್ 2024, 6:46 IST
Last Updated 17 ಜೂನ್ 2024, 6:46 IST
ಅಕ್ಷರ ಗಾತ್ರ

ಚಾಮರಾಜನಗರ; ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸೋಮವಾರ ಪ್ರತಿಭಟನೆ ನಡೆಸಿತು.

ಇಲ್ಲಿನ ಚಾಮರಾಜೇಶ್ವರ ಸ್ವಾಮಿ ದೇವಸ್ಥಾನದಿಂದ ಭುವನೇಶ್ವರಿ ವೃತ್ತದವರೆಗೂ ತಳ್ಳು ಗಾಡಿಯ ಮೇಲೆ ಸ್ಕೂಟರ್ ಇರಿಸಿ ಮೆರವಣಿಗೆ ನಡೆಸಿದ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ತೈಲ ಬೆಲೆ ಹೆಚ್ಚಿಸುವ ಮೂಲಕ ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಹಾಕಿದೆ ಎಂದು ಮಾಜಿ ಶಾಸಕ ಎನ್.ಮಹೇಶ್ ವಾಗ್ದಾಳಿ ನಡೆಸಿದರು.

ಪರಿಶಿಷ್ಟ ಜಾತಿ, ಪಂಗಡಗಳಿಗೆ ಮೀಸಲಿಟ್ಟಿದ್ದ ಅನುದಾನವನ್ನು ಗ್ಯಾರಂಟಿಗಳಿಗೆ ಬಳಕೆ ಮಾಡಲಾಗಿದೆ.

ಅಬಕಾರಿ ತೆರಿಗೆ ಹೆಚ್ಚಿಸಲಾಗಿದೆ, ನೋಂದಣಿ ಶುಲ್ಕ ಹೆಚ್ಚಿಸಲಾಗಿದೆ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT