ಗುಂಡ್ಲುಪೇಟೆ: ತಾಲ್ಲೂಕಿನ ಪ್ರಮುಖ ಧಾರ್ಮಿಕ ಸ್ಥಳ ಹಾಗೂ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಅಂತರಾಷ್ಟ್ರೀಯ ಹುಲಿ ದಿನಾಚರಣೆ ಅಂಗವಾಗಿ ಸ್ವಯಂ ಪ್ರೇರಿತ ಶ್ರಮದಾನದ ಮೂಲಕ ಪ್ಲಾಸ್ಟಿಕ್ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಶನಿವಾರ ಬೆಳಿಗ್ಗೆ 6ಕ್ಕೆ ನಮ್ಮ ಗುಂಡ್ಲುಪೇಟೆ ತಂಡ, ಎಸ್.ಎಲ್.ವಿ ಎಂಟರ್ ಪ್ರೈಸಸ್, ಗುಂಡ್ಲುಪೇಟೆ ಶೇಖರ್ ಆಗ್ರೋ ಟ್ರೇಡರ್ಸ್ ಹಾಗೂ ಬೇಗೂರಿನ ರಾಘವೇಂದ್ರ ಎಂಟರ್ ಪ್ರೈಸಸ್ ಸಹಯೋಗದಲ್ಲಿ ಸ್ವಚ್ಛ ಕೆಲಸ ನಡೆಸಲಾಯಿತು.

40 ಸ್ವಯಂ ಸೇವಕರು ಬೆಟ್ಟದ ತಪ್ಪಲಿನ ವಾಹನ ನಿಲ್ದಾಣ, ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಪ್ರವೇಶದ್ವಾರ, ಸಂಪರ್ಕ ರಸ್ತೆಯ ಇಕ್ಕೆಲಗಳು, ಹಗ್ಗದಹಳ್ಳ ಮತ್ತು ಕುಣಗಹಳ್ಳಿ ಸಂಪರ್ಕ ರಸ್ತೆ ಇತರೆ ಭಾಗಗಳನ್ನು ಒಳಗೊಂಡು 3 ರಿಂದ 4 ಕಿ.ಮೀ ನಷ್ಟು ನಿಗದಿತ ಪ್ರದೇಶದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಲಾಯಿತು.

ಗಾಜಿನ ಬಾಟಲಿ, ತಂಪುಪಾನೀಯ ಟಿನ್‍ಗಳು, ನೀರಿನ ಕ್ಯಾನ್ ಒಳಗೊಂಡ 40 ರಿಂದ 50 ಮೂಟೆಗಳಷ್ಟು ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವಾಯಿತು. ನಂತರ ಕೊಳೆಯುವ ಮತ್ತು ಕೊಳೆಯದ ತ್ಯಾಜ್ಯವನ್ನು ಬೇರ್ಪಡಿಸಿ ಹಂಗಳ ಗ್ರಾಮ ಪಂಚಾಯಿತಿಗೆ ನೀಡಲಾಯಿತು.

ಗೋಪಾಲಸ್ವಾಮಿ ಬೆಟ್ಟವನ್ನು ಜಿಲ್ಲಾಡಳಿತ ಪ್ಲಾಸ್ಟಿಕ್ ಮುಕ್ತ ಪ್ರದೇಶವಾಗಿ ಘೋಷಣೆ ಮಾಡಿದೆ. ಈಗ ತಪ್ಪಲಿನಲ್ಲೂ ಸ್ವಯಂ ಪ್ರೇರಿತ ಶ್ರಮದಾನದ ಮೂಲಕ ನಡೆಸಿದ ಪ್ಲಾಸ್ಟಿಕ್ ಸ್ವಚ್ಛತಾ ಕಾರ್ಯ ಕೈಗೊಂಡಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.