ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ | ಪೋಕ್ಸೊ: ಯುವಕನಿಗೆ 20 ವರ್ಷಗಳ ಕಠಿಣ ಶಿಕ್ಷೆ

Published 8 ಜುಲೈ 2023, 6:04 IST
Last Updated 8 ಜುಲೈ 2023, 6:04 IST
ಅಕ್ಷರ ಗಾತ್ರ

ಚಾಮರಾಜನಗರ: ಚಿಕ್ಕಪ್ಪನ ಮಗಳೊಂದಿಗೆ ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿದ್ದ ತಾಲ್ಲೂಕಿನ ಗ್ರಾಮವೊಂದರ ರಂಗಸ್ವಾಮಿ (21) ಎಂಬ ಯುವಕನಿಗೆ ನಗರದ ಮಕ್ಕಳ ಸ್ನೇಹಿ ಮತ್ತು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಆದೇಶಿಸಿದೆ.  2020ರ ಮಾರ್ಚ್‌ 11ರಂದು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

15 ವರ್ಷದ ಬಾಲಕಿಯನ್ನು ಬೈಕ್‌ನಲ್ಲಿ ಕರೆದುಕೊಂಡು ಹೋಗುವ ಸಮಯದಲ್ಲಿ ಅಪರಾಧಿಯು ಮೈ ಕೈ ಮುಟ್ಟಿ, ಬಲವಂತ ಸಂಭೋಗಕ್ಕೆ ಯತ್ನಿಸಿದ್ದ. ‘ಅಣ್ಣನಾದವನು ಹೀಗೆ ಮಾಡಬಾರದು ಎಂದು ಬಾಲಕಿ ಹೇಳಿದ್ದರೂ ಹಲವು ಬಾರಿ ದೈಹಿಕ ಸಂಪರ್ಕ ಮಾಡಿದ್ದ’ ಎಂದು ಆರೋಪಿಸಲಾಗಿದೆ.  

ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದ ಆಗಿನ ಇನ್‌ಸ್ಪೆಕ್ಟರ್‌ ಮಂಜು ಕೆ.ಎಂ ಅವರು ಆರೋಪ ಪಟ್ಟಿ ಸಲ್ಲಿಸಿದ್ದರು. 

ಆರೋಪಗಳೆಲ್ಲವೂ ಸಾಬೀತಾಗಿದ್ದರಿಂದ  ನ್ಯಾಯಾಧೀಶರಾದ ನಿಶಾರಾಣಿ ಅವರು ಗುರುವಾರ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಜೊತೆಗೆ ₹ 40 ಸಾವಿರ ದಂಡ ವಿಧಿಸಿದ್ದಾರೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಪ್ರಕರಣದ ಸಂತ್ರಸ್ತೆಗೆ 30 ದಿನಗಳ ಒಳಗಾಗಿ ₹4 ಲಕ್ಷ ಪರಿಹಾರವನ್ನು ನೀಡಬೇಕು ಎಂದೂ ಆದೇಶದಲ್ಲಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT