ಚಾಮರಾಜನಗರ: ವಕ್ಪ್ ಉಳಿಸಿ, ಸಂವಿಧಾನ ರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಶುಕ್ರವಾರ ನಗರದಲ್ಲಿ ವಕ್ಪ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಯಿತು.

ರೆಹಮತ್ ನಗರದ ಮೊಹಲ್ಲಾದಲ್ಲಿರುವ ಮಸೀದಿಯ ಮುಂಭಾಗ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಭಿತ್ತಿಪತ್ರ ಘೋಷಣೆ ಕೂಗಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ವಕ್ಫ್ ತಿದ್ದುಪಡಿ ಕಾಯ್ದೆ ಅಸಂವಿಧಾನಿಕವಾಗಿದ್ದು ಮುಸ್ಲಿಂ ಸಮುದಾಯದ ಧಾರ್ಮಿಕ ಹಕ್ಕಿನ ಉಲ್ಲಂಘನೆಯಾಗಿದೆ. ತಿದ್ದುಪಡಿ ಕಾಯ್ದೆ ವಾಪಾಸ್ ಪಡೆಯಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಸಮೀವುಲ್ಲಾ, ಮೌಲಾನಾ ಹಿದಾಯತ್ ಉಲ್ಲಾ, ಮಸೀದಿಯ ಅಧ್ಯಕ್ಷ ಸೈಯದ್ ಸಾಬ್, ಉಪಾಧ್ಯಕ್ಷ ಸೈಯದ್ ರಫೀ, ಸೈಯದ್ ಮುಸಾಹಿಬ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.