ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಕೊಡಲಾಗುತ್ತಿದೆ. ಹನೂರು ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು ಸ್ಥಳೀಯ ಗ್ರಾಮ ಪಂಚಾಯಿತಿಗಳು ನೀರು ಒದಗಿಸುತ್ತಿವೆ
ಮೋನಾ ರೋತ್, ಜಿಲ್ಲಾ ಪಂಚಾಯಿತಿ ಸಿಇಒ
‘ಸಾರ್ವಜನಿಕರ ಆಕ್ರೋಶ’
ಮಳೆ ಕೊರತೆಯಿಂದ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗುತ್ತಿದೆ. ಜಿಲ್ಲಾ ಕೇಂದ್ರ ಚಾಮರಾಜನಗರದಲ್ಲಿ ವಾರಕ್ಕೊಮ್ಮೆಯೂ ನೀರು ಸರಬರಾಜಾಗುತ್ತಿಲ್ಲ. ನಗರಸಭೆ ಕಾರ್ಯವೈಖರಿ ವಿರುದ್ಧ ಜನಸಾಮಾನ್ಯರು ಬೇಸತ್ತಿದ್ದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಮರ್ಪಕ ನೀರು ಕೊಡುವಂತೆ ನಗರದ 26 ವಾರ್ಡ್‌ನ ನಿವಾಸಿಗಳು ಜಿಲ್ಲಾಧಿಕಾರಿ ಕಚೇರಿಗೆ ಬಂದು ಆಡಳಿತ ವ್ಯವಸ್ಥೆಯ ವಿರುದ್ಧ ಹರಿಹಾಯ್ದರು. ಮನೆಗಳಲ್ಲಿರುವ ಕೊಳವೆ ಬಾವಿಗಳು ಬತ್ತಿಹೋಗಿದ್ದು ಕುಡಿಯುವ ನೀರಿಗೆ ಅಲೆಯಬೇಕಾಗಿದೆ. ವಾರ್ಡ್‌ಗೆ 12 ದಿನಗಳಾದರೂ ನೀರು ಬಿಟ್ಟಿಲ್ಲ ಎಂದು ಜಿಲ್ಲಾಧಿಕಾರಿ ಶ್ರೀರೂಪಾ ಎದುರೇ ಆಕ್ರೋಶ ಹೊರ ಹಾಕಿದರು.