ಚಾಮರಾಜನಗರ: ಚಾಮರಾಜನಗರ ವೃತ್ತ ವ್ಯಾಪ್ತಿಯ ಚಾಮರಾಜನಗರ ಮತ್ತು ಯಳಂದೂರು ತಾಲ್ಲೂಕಿನಲ್ಲಿರುವ ಎಲ್ಲ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ-1961ರ ಅನ್ವಯ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯ.
ಈಗಾಗಲೇ ನೋಂದಣಿ ಮಾಡಿಕೊಂಡ ಸಂಸ್ಥೆಗಳನ್ನು ಬಿಟ್ಟು ಉಳಿದ ಅಂಗಡಿ ಮಾತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಹಾಗೂ ಉದ್ದಿಮೆದಾರರು ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ರಾಜ್ಯ ಸರ್ಕಾರದ ಇ-ಕಾರ್ಮಿಕ ತಂತ್ರಾಂಶದಲ್ಲಿ https://www.ekarmika.karnataka.gov.in/ekarmika/static/Home.aspx ಈ ವೆಬ್‌ಸೈಟ್ ನಲ್ಲಿ ದಾಖಲೆಗಳನ್ನು ಸಲ್ಲಿಸಿ 15 ದಿನದೊಳಗೆ ನೋಂದಣಿ ಮಾಡಿಸಿಕೊಳ್ಳಬೇಕು.
ಸಂಸ್ಥೆಗಳ ತಪಾಸಣಾ ಸಮಯದಲ್ಲಿ ನೋಂದಣಿ ಆಗದಿರುವುದು ಕಂಡು ಬಂದಲ್ಲಿ ಕಾಯ್ದೆಯನ್ವಯ ಕ್ರಮ ಜರುಗಿಸಲಾಗುವುದು ಎಂದು ಚಾಮರಾಜನಗರ ವೃತ್ತದ ಹಿರಿಯ ಕಾರ್ಮಿಕ ನಿರೀಕ್ಷಕಿ ಜಿ.ಬಿ. ವೀಣಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.