ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಈಚೆಗೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡಿರುವ ಕ್ರೀಡಾ ಕ್ಷೇತ್ರಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಶೀಘ್ರ ಆರಂಭಿಸಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪಾ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಕ್ರೀಡಾಂಗಣ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕ್ರೀಡಾಪಟುಗಳನ್ನು ಉತ್ತೇಜಿಸುವ ಸಲುವಾಗಿ ಸರ್ಕಾರ ಜಿಲ್ಲೆಯಲ್ಲಿ ವಿವಿಧ ಕ್ರೀಡಾ ಸೌಕರ್ಯಗಳನ್ನ ಒದಗಿಸುತ್ತಿದೆ. ಅದರಂತೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡಿರುವ ಈಜುಕೊಳ, ವಿವಿದ್ದೋದ್ದೇಶ ಒಳಾಂಗಣ ಕ್ರೀಡಾಂಗಣ, ವಿವಿಧ ಅಂಕಣಗಳ ನಿರ್ಮಾಣ ಕಾಮಗಾರಿಗಳನ್ನು ತ್ವರಿತವಾಗಿ ಆರಂಭಿಸಬೇಕು ಎಂದು ಸೂಚಿಸಿದರು.

ಯಳಂದೂರು ತಾಲ್ಲೂಕಿನಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ನಿವೇಶನ ಗುರುತಿಸಲು ಪ್ರತ್ಯೇಕ ತಂತ್ರಜ್ಞರ ಸಮಿತಿ ರಚಿಸಿ ವರದಿ ಸಲ್ಲಿಸಬೇಕು, ಚಾಮರಾಜನಗರದ ಕ್ರೀಡಾ ವಸತಿ ನಿಲಯಕ್ಕೆ ಕ್ರೀಡಾಪಟುಗಳ ಪ್ರವೇಶಾತಿ ಹೆಚ್ಚಿಸುವ ಸಂಬಂಧ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪಾ ಸೂಚಿಸಿದರು. ಕ್ರೀಡಾ ಕ್ಷೇತ್ರಕ್ಕೆ ಮೂಲಸೌಕರ್ಯ ಕಲ್ಪಿಸಲು ಸ್ಥಳೀಯ ಸಂಸ್ಥೆಗಳಲ್ಲಿ ಲಭ್ಯವಿರುವ ಕ್ರೀಡಾನಿಧಿಯನ್ನು ವಿನಿಯೋಗಿಸಬೇಕು. ರಾಜ್ಯ ಸರ್ಕಾರದ ಯುವ ಚೈತನ್ಯ ಯೋಜನೆಯಡಿಯಲ್ಲಿ ನೋಂದಣಿಯಾಗಿರುವ ಜಿಲ್ಲೆಯ ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಯುವಜನ ಸಂಘ ಕುದೇರು, ಉದಯ ಭೀಮ್ ಯುವಜನ ಸಂಘ ಹುರುಳೇನಂಜನಪುರ, ಡಾ.ಬಿ.ಆರ್.ಅಂಬೇಡ್ಕರ್ ಯುವಜನ ಸಂಘ ಪಾಳ್ಯ, ಕೊಳ್ಳೇಗಾಲ, ವಿಜ್ಞಾನಿ ಡಾ.ಆರ್.ಅಂಬೇಡ್ಕರ್ ಯುವಜನ ಸಂಘ ಗಣಿಗನೂರು ಯಳಂದೂರು, ಜೈ ಭಗೀರಥ ಯುವಕರ ಸಂಘ ಅಣ್ಣೂರುಕೇರಿ ಗುಂಡ್ಲುಪೇಟೆ, ಭೋವಿ ಸತ್ವ ಯುವಜನ ಕಲಾ ಸಂಘ ಮಂಗಲ ಗ್ರಾಮ ಚಾಮರಾಜನಗರ ಸಂಘಗಳು ಆಯ್ಕೆಯಾಗಿವೆ.

6 ಸಂಘಗಳ ಪೈಕಿ ಉದಯ ಭೀಮ್ ಯುವಜನ ಸಂಘ ಹುರುಳಿನಂಜನಪುರ ಸಂಘಕ್ಕೆ ಜಿಲ್ಲಾಧಿಕಾರಿ ಶ್ರೀರೂಪಾ ಕ್ರೀಡಾ ಪರಿಕರಗಳನ್ನು ವಿತರಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶೃತಿ, ಡಿವೈಎಸ್ಪಿ ಸೋಮಣ್ಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಕಿರಣ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಪಾಟೀಲ್, ಚಾಮರಾಜನಗರ ವಿವಿ ಎನ್.ಎಸ್.ಎಸ್ ಅಧಿಕಾರಿ ಮಹೇಶ್ ಸಭೆಯಲ್ಲಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-37-1176334873

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.