ಚಾಮರಾಜನಗರ: ವಿದ್ಯಾರ್ಥಿಗಳು ಮೊಬೈಲ್ ಕೈಬಿಟ್ಟು ಪುಸ್ತಕಗಳನ್ನು ಕೈಗೆತ್ತಿಕೊಂಡರೆ ಉತ್ತಮ ಅಂಕಗಳಿಸಲು ಸಹಕಾರಿಯಾಗುತ್ತದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಚ್.ಎಸ್.ಬಿಂಧ್ಯಾ ಸಲಹೆ ನೀಡಿದರು.

ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿರುವ ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ಪುರುಷರಿಗೆ ಸಮನಾಗಿ ದುಡಿಯುತ್ತಿದ್ದು ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಹಿಳೆಯರ ಶಿಕ್ಷಣ ಹಾಗೂ ಸಬಲೀಕರಣಕ್ಕಾಗಿ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ.

ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಮಹಿಳೆಯರು ಮುಖ್ಯವಾಹಿನಿಗೆ ಬರಬೇಕು. ಅತಿಯಾದ ಮೊಬೈಲ್ ಗೀಳಿನಿಂದ ಹೊರಬಂದು ಗ್ರಂಥಾಲಯಗಳಿಗೆ ಭೇಟಿನೀಡಿ ಪುಸ್ತಕಗಳನ್ನು ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಯುವತಿಯರು ವಿವಾಹವಾದ ಬಳಿಕ ವಿದ್ಯಾಭ್ಯಾಸವನ್ನು ಮೊಟಕುಗೊಳಿಸುತ್ತಾರೆ. ಮದುವೆಯಾದ ಬಳಿಕವೂ ಉನ್ನತ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೇಳಿದರು.

ಕೊಳ್ಳೇಗಾಲದ ಮಾದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ.ಜಿ.ಸುಧಾ ಮಾತನಾಡಿ, ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಒಂದು ದಿನ ತಿಂಗಳಿಗೆ ಸೀಮಿತವಾಗದೆ ಪ್ರತಿನಿತ್ಯ ಆಚರಣೆಯಾಗಬೇಕು, ತಂತ್ರಜ್ಞಾನ ಯುಗದಲ್ಲಿ ರಾಜ್ಯದಲ್ಲಿ ಮಹಿಳೆಯರು ಉತ್ತಮ ಸಾಧನೆ ತೋರುವ ಮೂಲಕ ಪ್ರತಿ ಕ್ಷೇತ್ರಕ್ಕೂ ಕೊಡುಗೆ ನೀಡುತ್ತಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಟಿ.ಎಂ.ಮರಿಸ್ವಾಮಿ ಮಾತನಾಡಿ ಜೆಎಸ್ಎಸ್ ಶಿಕ್ಷಣ ಸಂಸ್ಥೆಯು ಶಿಕ್ಷಣದ ಜೊತೆಗೆ ವಿದ್ಯಾರ್ಥಿನಿಯರಿಗೆ ಭಾರತೀಯ ಸಂಸ್ಕೃತಿಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಕಾಲೇಜು ವಿದ್ಯಾರ್ಥಿನಿಯರು ಉತ್ತಮ ಸಾಧನೆ ತೋರುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಆರ್.ಉಮೇಶ್, ಎಂ.ಸೌಮ್ಯಾ, ಜಮುನಾ, ಸುಷ್ಮಾ, ಮಾನಸ, ರೂಪಶ್ರೀ, ನಿರ್ಮಲಾ, ಪವಿತ್ರಾ, ಮಮತಾ, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಅನುಶ್ರೀ ಸೇರಿದಂತೆ ಹಲವರು ಇದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.