ಚಾಮರಾಜನಗರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಾಮರಾಜನಗರ ವಿಭಾಗದಿಂದ ಶಾಲಾ ಮತ್ತು ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ 2026-27ನೇ ಶೈಕ್ಷಣಿಕ ಸಾಲಿಗೆ ಉಚಿತ ರಿಯಾಯಿತಿ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in/buspassservices/ ಮೂಲಕ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಯಾವುದೇ ಶುಲ್ಕ ಇರುವುದಿಲ್ಲ. ಕರ್ನಾಟಕ-ಒನ್, ಗ್ರಾಮ-ಒನ್ ಹಾಗೂ ಬೆಂಗಳೂರು-ಒನ್ ಕೇಂದ್ರಗಳಲ್ಲಿ ಸೇವಾ ಶುಲ್ಕ 30 ಪಾವತಿಸಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಬಸ್ ಪಾಸ್ಗೆ ಅರ್ಜಿ ಸಲ್ಲಿಸಲು ಡಿಕ್ಲರೇಶನ್ ಫಾರಂ ಅನ್ನು ಸೇವಾಸಿಂಧು ತಂತ್ರಾಂಶದಲ್ಲಿ ಅಥವಾ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವೆಬ್ಸೈಟ್ನಲ್ಲಿ https://ksrtc.Karnataka.gov.in/studentpass ಡೌನ್ ಲೋಡ್ ಮಾಡಿಕೊಳ್ಳಬಹುದು.

ನೆರೆ ರಾಜ್ಯದಲ್ಲಿ ವಾಸವಿದ್ದು ರಾಜ್ಯದ ಶಾಲೆ, ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ರಾಜ್ಯದಲ್ಲಿ ವಾಸವಿದ್ದು, ನೆರೆ ರಾಜ್ಯದ ಶಾಲೆ, ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಗಡಿಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿಗಳು ರಿಯಾಯಿತಿ ಬಸ್ ಪಾಸ್ ಪಡೆಯಬಹುದು.

ರಾಜ್ಯ ರಸ್ತೆ ಸಾರಿಗೆ ನಿಗಮ ವ್ಯಾಪ್ತಿಯ 123 ಪಾಸ್ ವಿತರಣಾ ಕೌಂಟರ್ಗಳ ವಿವರಗಳನ್ನು ನಿಗಮದ ವೆಬ್ಸೈಟ್ನಲ್ಲಿ ಒದಗಿಸಲಾಗಿದೆ ಎಂದು ಚಾಮರಾಜನಗರ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-37-207100522

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.