ಚಾಮರಾಜನಗರ: ದಲಿತ ಸಂಘರ್ಷ ಸಮಿತಿಗಳ ಐಕ್ಯತಾ ಹೋರಾಟ ಚಾಲನಾ ಸಮಿತಿ ವತಿಯಿಂದ ಆಗಸ್ಟ್ ಮೊದಲ ವಾರದಲ್ಲಿ ಸಂವಿಧಾನೋತ್ಸವ ಹಾಗೂ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶ ನಡೆಯಲಿದೆ.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಡಿಎಸ್‌ಎಸ್ ಐಕ್ಯತಾ ಹೋರಾಟ ಚಾಲನಾ ಸಮಿತಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸಮಿತಿ ಜಿಲ್ಲಾ ಸಂಚಾಲಕ ಕೆ.ಎಂ.ನಾಗರಾಜು ಸಭೆಯಲ್ಲಿ ಸಂವಿಧಾನೋತ್ಸವ ಆಯೋಜನೆ ಬಗ್ಗೆ ಮಾಹಿತಿ ನೀಡಿದರು.
ಐಕ್ಯತಾ ಹೋರಾಟ ಚಾಲನಾ ಸಮಿತಿಯ 13 ಬೇಡಿಕೆಗಳನ್ನು ಸರ್ಕಾರಕ್ಕೆ ಮಂಡಿಸಲೂ ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಮಿತಿ ಮುಖಂಡರಾದ ಸಿ.ಎಂ.ಶಿವಣ್ಣ, ರಾಮಸಮುದ್ರ ಸುರೇಶ್, ಯರಿಯೂರು ರಾಜಣ್ಣ, ಸುಭಾಷ್ ಮಾಡ್ರಳ್ಳಿ, ಕಂದಹಳ್ಳಿ ನಾರಾಯಣ, ನಂಜುಂಡಸ್ವಾಮಿ, ಉಮ್ಮತ್ತೂರು ಸೋಮಣ್ಣ, ಹೊನ್ನೂರು ರಾಜೇಂದ್ರ, ರಂಗಸ್ವಾಮಿ ಗುಂಡ್ಲುಪೇಟೆ, ಸಿದ್ದರಾಜು, ಶಿವಕುಮಾರ್, ಸುರೇಂದ್ರಕುಮಾರ್, ನಾಗಶೇಖರ್, ರಾಮಸಮುದ್ರ ಸಿದ್ದರಾಜು, ಸಾಹಿತಿ ಸಿದ್ದರಾಜು, ಮರಿಯಾಲದಹುಂಡಿ ಕುಮಾರ್ ಇತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.