ಚಾಮರಾಜನಗರ: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಯಳಂದೂರು ತಾಲ್ಲೂಕಿನ ಯರಿಯೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಡಿ. ಶಿವಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಡಿ.ಶಿವಕುಮಾರ್ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ಕ್ರಮ ತೆಗೆದುಕೊಳ್ಳದೆ ಏಕಪಕ್ಷೀಯವಾಗಿ ಕ್ರಮ ತೆಗೆದುಕೊಂಡು ಗ್ರಾಮದಲ್ಲಿ ಕೋಮು ಗಲಭೆಗೆ ಕಾರಣವಾಗಿದ್ದಕ್ಕೆ ಹಾಗೂ ಕಚೇರಿಯ ಕರ್ತವ್ಯ ನಿರ್ವಹಿಸುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಸಲ್ಲಿಕೆಯಾಗಿದ್ದ ವರದಿಯ ಅನ್ವಯ ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್ ತಿಳಿಸಿದ್ದಾರೆ.

ಅಮಾನತು ಆದೇಶ ತಕ್ಷಣದಿಂದ ಜಾರಿಗೆ ಬರಲಿದ್ದು ಇಲಾಖಾ ವಿಚಾರಣೆ ಕಾಯ್ದಿರಿಸಲಾಗಿದೆ ಎಂದು ಸಿಇಒ ಆದೇಶದಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-37-582473918

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.