ಚಾಮರಾಜನಗರ: ಕ್ಷಯರೋಗ ತಡೆಗೆ ಪರಿಣಾಮಕಾರಿಯಾಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಮೂಲಕ ಗ್ರಾಮ ಪಂಚಾಯಿತಿಗಳನ್ನು ಕ್ಷಯರೋಗ ಮುಕ್ತಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್ ಸೂಚನೆ ನೀಡಿದರು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕ್ಷಯರೋಗ ದಿನಾಚರಣೆ ಹಾಗೂ ಕ್ಷಯಮುಕ್ತ ಗ್ರಾಮ ಪಂಚಾಯಿತಿಗಳಿಗೆ ಘೋಷಣಾ ಪತ್ರ ವಿತರಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರತಿ ವರ್ಷ ಪ್ರಪಂಚದಲ್ಲಿ ಪತ್ತೆಯಾಗುವ ಕ್ಷಯರೋಗಗಳ ಪೈಕಿ ಶೇ 27ರಷ್ಟು ಭಾರತದಲ್ಲಿ ಕಂಡು ಬರುತ್ತಿರುವುದು ಆತಂಕಕಾರಿ. ಜಿಲ್ಲೆಯಲ್ಲೂ ಕ್ಷಯರೋಗ ಪ್ರಕರಣಗಳು ಇಳಿಮುಖವಾಗಬೇಕಿದ್ದು ಗ್ರಾಮ ಪಂಚಾಯಿತಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಪರಿಣಾಮಕಾರಿಯಾಗಿ ಕ್ಷಯರೋಗ ತಡೆಗೆ ಕಾರ್ಯ ನಿರ್ವಹಿಸಬೇಕು ಎಂದರು.

ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 35 ಗ್ರಾಮ ಪಂಚಾಯಿತಿ, ಎರಡನೇ ಹಂತದಲ್ಲಿ 15 ಗ್ರಾಮ ಪಂಚಾಯಿತಿ, ಮೂರನೇ ಹಂತದಲ್ಲಿ 5 ಗ್ರಾಮ ಪಂಚಾಯಿತಿಗಳನ್ನು ಕ್ಷಯಮುಕ್ತ ಗ್ರಾಮ ಪಂಚಾಯಿತಿಗಳಾಗಿ ಘೋಷಿಸಲಾಗಿದೆ. ಕ್ಷಯ ನಿರ್ಮೂಲನೆಗೆ ನಿರಂತರ ಶ್ರಮ ಅಗತ್ಯ. ಕ್ಷಯಮುಕ್ತ ಗ್ರಾಮ ಪಂಚಾಯಿತಿಗಳಾಗಲು ಶ್ರಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಚಿದಂಬರ ಮಾತನಾಡಿ ಕ್ಷಯರೋಗ ನಿಯಂತ್ರಿಸಲು ಎಲ್ಲರೂ ತಂಡವಾಗಿ ಕರ್ತವ್ಯ ನಿರ್ವಹಿಸಬೇಕಿದೆ. ಪಂಚಾಯಿತಿ ವ್ಯಾಪ್ತಿಯಲ್ಲಿ ಕ್ಷಯರೋಗ ಲಕ್ಷಣಗಳು ಕಂಡುಬಂದರೆ ಕೂಡಲೇ ತಪಾಸಣೆಗೆ ಒಳಪಡಿಸಿ ಚಿಕಿತ್ಸೆ ನೀಡಬೇಕು, ಕ್ಷಯ ರೋಗದ ಬಗ್ಗೆ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ.ಎಂ.ಎಸ್. ರವಿಕುಮಾರ್ ಮಾತನಾಡಿ ದೇಶದಲ್ಲಿ ಪ್ರತಿವರ್ಷ 27 ಲಕ್ಷಕ್ಕೂ ಹೆಚ್ಚು ಕ್ಷಯರೋಗ ಪ್ರಕರಣಗಳು ಪತ್ತೆಯಾಗುತ್ತಿವೆ. 2024ರಲ್ಲಿ 35 ಗ್ರಾಮ ಪಂಚಾಯಿತಿಗಳನ್ನು ಕ್ಷಯಮುಕ್ತ ಎಂದು ಘೋಷಿಸಲಾಗಿತ್ತು. 2025ರಲ್ಲಿ 55 ಗ್ರಾಮ ಪಂಚಾಯಿತಿಗಳು ಕ್ಷಯಮುಕ್ತವಾಗಿವೆ ಎಂದರು.

ಕಾರ್ಯಕ್ರಮದಲ್ಲಿ ಕ್ಷಯಮುಕ್ತ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳಿಗೆ ಘೋಷಣಾ ಪತ್ರವನ್ನು ವಿತರಿಸಲಾಯಿತು. ಮಿಷನ್ ಏಡ್ಸ್ ಸುರಕ್ಷತಾ ಅಭಿಯಾನದ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಆರೋಗ್ಯ ಇಲಾಖೆಯ ಕಾರ್ಯಕ್ರಮ ಅಧಿಕಾರಿಗಳಾದ ಡಾ.ಸುಂದರೇಶ್, ಡಾ. ರಾಜೇಶ್, ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿ ರಾಜೀವ್ ಕಾರ್ಯಕ್ರಮದಲ್ಲಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-37-442784346

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.