ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀರೂಪಾ ನಗರಲ್ಲಿರುವ ‘ಸ್ಪಂದನ’ ವ್ಯಸನ ಮುಕ್ತ ಕೇಂದ್ರಕ್ಕೆ ಭೇಟಿನೀಡಿ ಅಲ್ಲಿನ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿ, ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದ ಜಿಲ್ಲಾಧಿಕಾರಿ, ದುಶ್ಚಟಗಳನ್ನು ತ್ಯಜಿಸಿ ಆರೋಗ್ಯಕರ ಜೀವನ ನಡೆಸಬೇಕು, ಚಿಕಿತ್ಸೆ ಪೂರ್ಣಗೊಂಡ ಬಳಿಕ ಸ್ವಂತ ಊರುಗಳಿಗೆ ತೆರಳಿ ಉತ್ತಮ ಬದುಕು ರೂಪಿಸಿಕೊಳ್ಳಬೇಕು. ಇತರರಿಗೂ ದುಶ್ಚಟಗಳನ್ನು ತ್ಯಜಿಸಲು ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.

ಪ್ರಸ್ತುತ ಕೇಂದ್ರದಲ್ಲಿ 12 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಿಬ್ಬಂದಿ ಮಾಹಿತಿ ನೀಡಿದರು. ದಾಖಲೆಗಳನ್ನು ಪರಿಶೀಲಿಸಿ, ಚಿಕಿತ್ಸಾ ಕ್ರಮ ಸಹಿತ ಪುನರ್ವಸತಿ ಕಾರ್ಯಗಳ ಕುರಿತು ಜಿಲ್ಲಾಧಿಕಾರಿ ಮಾಹಿತಿ ಪಡೆದುಕೊಂಡರು. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಪಿ.ಚಂದ್ರಶೇಖರ್, ಆರೋಗ್ಯ ಸಿಬ್ಬಂದಿ ಭಾಗ್ಯಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-37-328524616

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.