ಗುಂಡ್ಲುಪೇಟೆ: ತಾಲ್ಲೂಕಿನ ಮಾದಾಪಟ್ಟಣ ಗ್ರಾಮದಲ್ಲಿ ₹20 ಲಕ್ಷ ವೆಚ್ಚದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಚ್.ಎಂ.ಗಣೇಶಪ್ರಸಾದ್ ಭೂಮಿ ಪೂಜೆ ನೆರವೇರಿಸಿದರು.

ಗಣೇಶಪ್ರಸಾದ್ ಮಾತನಾಡಿ, ಎಸ್ಸಿಎಸ್ಪಿ ಯೋಜನೆಯಡಿ ಭವನ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನ ಕೊಡಲಾಗುವುದು. ಜೊತೆಗೆ ಬಾಕಿ ಉಳಿದ ಕಾಮಗಾರಿಗಳಿಗೆ ಹಂತ ಹಂತವಾಗಿ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು.

ಕ್ಷೇತ್ರಕ್ಕೆ ವಿಶೇಷ ಅನುದಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಬಂಧಪಟ್ಟ ಸಚಿವರಿಗೆ ಮನವಿ ಮಾಡಲಾಗಿದೆ. ಅವರು ಸಕಾರಾತ್ಮವಾಗಿ ಸ್ಪಂದಿಸಿದ್ದು, ಮುಂದಿನ ದಿನಗಳಲ್ಲಿ ಹೆಚ್ಚು ಅನುದಾನ ದೊರಕುವ ನಿರೀಕ್ಷೆಯಿದೆ. ಈಗಾಗಲೇ ಬಿಡುಗಡೆಯಾಗಿರುವ ಸಿಎಂ ವಿಶೇಷ ಅನುದಾನದಲ್ಲಿ ಆದ್ಯತೆ ಮೇರೆಗೆ ಅನುದಾನ ಹಾಕಲಾಗಿದೆ ಎಂದು ತಿಳಿಸಿದರು.

ಈ ವೇಳೆ ಸಚಿವ ಎಚ್.ಸಿ.ಮಹದೇವಪ್ಪ ಆಪ್ತ ಸಹಾಯಕ ಹೊರೆಯಾಲ ಗೋಪಾಲ್, ಸುಭಾಷ್ ಮಾಡ್ರಹಳ್ಳಿ ಸೇರಿದಂತೆ ಹಲವು ಮಂದಿ ಕಾಂಗ್ರೆಸ್ ಮುಖಂಡರು ಹಾಗೂ ಮಾದಾಪಟ್ಟಣ ಗ್ರಾಮಸ್ಥರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-37-1712732357

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.