ಸಂತೇಮರಹಳ್ಳಿ: ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ₹20 ಲಕ್ಷ ಅನುದಾನ ನೀಡುವುದಾಗಿ ಶಾಸಕ ಎ.ಆರ್.ಕೃಷ್ಣಮೂರ್ತಿ ಭರವಸೆ ನೀಡಿದರು.

ಜನ್ನೂರು ಗ್ರಾಮದಲ್ಲಿ ಭಾನುವಾರ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯಲ್ಲಿ ಅವರು ಮಾತನಾಡಿದರು. ಗ್ರಾಮದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ, ಅಭಿವೃದ್ಧಿ ಕಾಮಗಾರಿಗಳಿಗೆ ₹1.75 ಕೋಟಿ ಅನುದಾನ ನೀಡಲಾಗಿದೆ. ಗ್ರಾಮದ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ₹20 ಲಕ್ಷ ಅನುದಾನ ನೀಡಲಾಗುವುದು.ಉಳಿಕೆ ಹಣವನ್ನು ಸಮಾಜ ಕಲ್ಯಾಣ ಖಾತೆ ಸಚಿವ ಎಚ್.ಸಿ.ಮಹದೇವಪ್ಪ ಹಾಗೂ ಸಂಸದರಿಂದ ಅನುದಾನ ಪಡೆದು ಸುಸಜ್ಜಿತವಾದ ಭವನ ನಿರ್ಮಿಸಿಕೊಳ್ಳಬೇಕು. ಗ್ರಾಮದ ಕೆರೆಗೆ ನೀರು ತುಂಬಿಸಲು ಪ್ರಸ್ತಾವ ಸಲ್ಲಿಸಲಾಗುವುದು ಎಂದರು.

ಅಂಬೇಡ್ಕರ್ ಅವರು ಶ್ರೇಷ್ಠ ಸಂವಿಧಾನವನ್ನು ನೀಡಿ ಪ್ರಬುದ್ಧ ಭಾರತ ನಿರ್ಮಾಣ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಸಮ ಬಾಳ್ವೆ, ನೆಮ್ಮದಿಯಿಂದ ಜೀವನ ಮಾಡಲು ಸಂವಿಧಾನ ಕಾರಣವಾಗಿದೆ ಎಂದು ತಿಳಿಸಿದರು. ವಿಧಾನ ಪರಿಷತ್ ಸದಸ್ಯ ಕೆ.ಶಿವಕುಮಾರ್, ತಿ.ನರಸೀಪುರ ನಳಂದ ಬುದ್ಧ ವಿಹಾರದ ಬೋದಿರತ್ನ ಭಂತೇಜಿ, ಪ್ರಾಧ್ಯಾಪಕ ಬಿಪಿನ್ ನಾಗರಾಜು, ಚಾಮೂಲ್ ನಿರ್ದೇಶಕ ಕಮರವಾಡಿ ರೇವಣ್ಣ, ಮುಖಂಡರಾದ ಗೋವಿಂದರಾಜು, ಮಹದೇವಸ್ವಾಮಿ, ತಮ್ಮಣ್ಣ, ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷೆ ರತ್ನಮ್ಮ, ಪರಶಿವಮೂರ್ತಿ, ನಾಗಯ್ಯ, ಒಡಿಪಿ ನಾಗರಾಜು, ಶಿವಣ್ಣ, ರೇವಣ್ಣ, ಶಿವು, ನಾಗರಾಜು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-37-1949822139

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.