ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಸಂಯುಕ್ತ ಆಶ್ರಯದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಏ.14ರಂದು ನಗರದಲ್ಲಿ ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ 9.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಗಣ್ಯರು ಮಾಲಾರ್ಪಣೆ ಮಾಡುವರು. ಬೆಳಿಗ್ಗೆ 10.30 ಗಂಟೆಗೆ ಅಂಬೇಡ್ಕರ್ ಭವನದಿಂದ ಭಾವಚಿತ್ರದ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಮಧ್ಯಾಹ್ನ 1 ಗಂಟೆಗೆ ಸರ್ಕಾರಿ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.

ಮೈಸೂರಿನ ವಿಶ್ವಮೈತ್ರಿ ಬುದ್ಧವಿಹಾರದ ಡಾ.ಕಲ್ಯಾಣ ಸಿರಿ ಭಂತೇಜಿ ಭಾಗವಹಿಸುವರು. ಜಿಲ್ಲಾಉಸ್ತುವಾರಿ ಸಚಿವ ಕೆ.ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯ ಸುನೀಲ್ ಬೋಸ್ ಉಪಸ್ಥಿತರಿರುವರು.

ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸುವರು, ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ರಹಮತ್ ತರೀಕೆರೆ ಮುಖ್ಯ ಭಾಷಣ ಮಾಡುವರು.

ಗುಂಡ್ಲುಪೇಟೆಯ ಪದ್ಮಪಾಣಿ ಲಲಿತಾ ಕಲಾ ಅಕಾಡೆಮಿಯ ನಾರಾಯಣಸ್ವಾಮಿ ಮತ್ತು ತಂಡದಿಂದ ಅಂಬೇಡ್ಕರ್ ಕುರಿತು ಗೀತ ಗಾಯನ ಕಾರ್ಯಕ್ರಮ ನಡೆಯಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-37-1536320864

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.