ಕೊಳ್ಳೇಗಾಲ: ಡಾ.ಬಿ.ಆರ್ ಅಂಬೇಡ್ಕರ್ ಅವರು ವಿಶ್ವವೇ ಮೆಚ್ಚುವ ಸಂವಿಧಾನವನ್ನು ನಮಗೆ ನೀಡಿದ್ದಾರೆ ಎಂದು ಶಾಸಕ ಎಆರ್ ಕೃಷ್ಣಮೂರ್ತಿ ಹೇಳಿದರು.

ನಗರದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮಂಗಳವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿ ಮೀಸಲಾತಿ ಕುರಿತು ಉಂಟಾಗಿರುವ ಗೊಂದಲದ ವಾತಾವರಣದ ಬಗ್ಗೆ ವಿಷಾದಿಸಿದ ಅವರು ಅಂಬೇಡ್ಕರ್ ಮೀಸಲಾತಿ ಕೊಟ್ಟಾಗ ಪರಿಶಿಷ್ಟ ಜಾತಿಯಲ್ಲಿ 6 ಜಾತಿ ಮಾತ್ರ ಇತ್ತು. ಇಂದು ನೂರಕ್ಕೂ ಹೆಚ್ಚು ಜಾತಿಗಳು ಸೇರ್ಪಡೆಯಾಗಿ ಅಂದು ಅಸ್ಪೃಶ್ಯತೆ ಒಳಾಗಿದ್ದ ಜನಾಂಗಕ್ಕೆ ಅನ್ಯಾಯವಾಗಿದೆ. ಒಗ್ಗಟ್ಟಾಗಿ ಹೋರಾಟ ಮಾಡುವ ಅನಿರ್ವಾಯತೆ ಇದೆ ಎಂದರು.

ಉಪ ವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಜಾರಿಗೆ ತಂದಿರುವ ಸಂವಿಧಾನವನ್ನು ಸಂರಕ್ಷಿಸುವ ಗುರಿ ನಮ್ಮದಾಗಿರಬೇಕು ಎಂದರು. ಮೈಸೂರಿನ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕರು ನಾಗರಾಜು ಮುಖ್ಯ ಭಾಷಣಕಾರ ಮಾಡಿದರು.

ಪ್ರತಿಭಾವಂತ ಮಕ್ಕಳು, ಪ್ರಬಂಧ ಸ್ಪರ್ಧೆಯ ವಿಜೇತ ಮಕ್ಕಳಿಗೆ ಸನ್ಮಾನಿಸಿದರು. ಅಂಬೇಡ್ಕರ್ ಸಂಘದ ಸಂಸ್ಥಾಪಕರು, ನಿವೃತ್ತ ಅಧಿಕಾರಿಗಳನ್ನು ಗೌರವಿಸಿದರು. ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡ ಅಧ್ಯಕ್ಷರಾಗಿರುವ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರನ್ನು ಅಭಿನಂದಿಸಿದರು.

ಜೇತವನ ಬುದ್ಧ ವಿಹಾರ ಕೇಂದ್ರದ ಮನೋರಖಿತ ಬಂತೇಜಿ, ತಹಶೀಲ್ದಾರ್ ಬಸವರಾಜು, ತಾಲ್ಲೂಕು ಪಂಚಾಯಿತಿ ಇಒ ಗುರುಶಾಂತಪ್ಪ ಬೆಳ್ಳುಂಡಗಿ, ಬಿಇಒ ಮಂಜುಳಾ, ನಗರಸಭೆ ಪೌರಾಯುಕ್ತೆ ರುದ್ರಮ್ಮ ಶರಣಯ್ಯ, ಸಮಾಜ ಕಲ್ಯಾಣಾಧಿಕಾರಿ ಕೇಶವಮೂರ್ತಿ, ಡಾ.ಲೋಕೇಶ್ವರಿ, ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಸಂಘ ಅಧ್ಯಕ್ಷ ಆನಂದಮೂರ್ತಿ ಇದ್ದರು.

ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಶಾಸಕ ಎಆರ್ ಕೃಷ್ಣಮೂರ್ತಿ, ಅಧಿಕಾರಿಗಳು ಪುಷ್ಪಾರ್ಚನೆ ಮಾಡಿದರು. ಅಂಬೇಡ್ಕರ್ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿ ಇಟ್ಟು ಮೆರವಣಿಗೆ ಮಾಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-37-90263982

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.