ಸಂತೇಮರಹಳ್ಳಿ: ಶಾಸಕ ಎ.ಆರ್.ಕೃಷ್ಣಮೂರ್ತಿ ಅವರಿಗೆ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಸಮೀಪದ ಕಸ್ತೂರು ಗ್ರಾಮದ ಕ್ರೈಸ್ತ ಸಮುದಾಯದವರು ಸಾಡೇ ಸ್ಮಾರಕ ಚರ್ಚ್ ಆವರಣದಲ್ಲಿ ಭಾನುವಾರ ಒತ್ತಾಯಿಸಿದರು.

ಚರ್ಚ್ನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಕ್ಷೇತ್ರದಲ್ಲಿರುವ ಎಲ್ಲ ಸಮುದಾಯದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ರಾಜಕೀಯದಲ್ಲಿ ಒಳ್ಳೆಯ ಅನುಭವ ಹೊಂದಿರುವ ಹಿರಿಯ ರಾಜಕೀಯ ಮುತ್ಸದ್ಧಿ ಆಗಿದ್ದಾರೆ. ಈ ಬಾರಿ ಸಚಿವ ಸ್ಥಾನ ನೀಡುವ ಮೂಲಕ ಜಿಲ್ಲೆಯ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಅವಕಾಶ ಕಲ್ಪಿಸಿಕೊಡಬೇಕು ಎಂದು ಧರ್ಮಗುರುಗಳು ಹಾಗೂ ಸಮುದಾಯದವರು ಒತ್ತಾಯಿಸಿದರು.

ರೆವರೆಂಡ್ ಮಧುಕಿರಣ್ ಸೇರಿದಂತೆ ಕ್ರೈಸ್ತ ಸಮುದಾಯದವರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-37-947032349

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.