ಸಂತೇಮರಹಳ್ಳಿ: ಸಮೀಪದ ಹೆಗ್ಗವಾಡಿಪುರ ಗ್ರಾಮದಲ್ಲಿ ಮಳೆ ಗಾಳಿಗೆ ಬಾಳೆ ಬೆಳೆ ನಾಶವಾಗಿದ್ದು, ಸ್ಥಳಕ್ಕೆ ತೋಟಗಾರಿಕೆ ಇಲಾಖೆ ಅಧಿಕಾರಿ ಮಂಜುಳಾ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭ ಮಾತನಾಡಿ, ‘ಕಳೆದ ಎರಡು ದಿನಗಳ ಹಿಂದೆ ಸುರಿದ ಮಳೆ ಗಾಳಿಗೆ ಬಸವಟ್ಟಿ, ಕಾವುದವಾಡಿ, ದೇಶವಳ್ಳಿ ಹಾಗೂ ಹೆಗ್ಗವಾಡಿಪುರ ಭಾಗಗಳಲ್ಲಿ ನೂರಾರು ಎಕರೆ ಬಾಳೆ ಫಸಲು ನೆಲಕ್ಕುರುಳಿವೆ. ಇದರಿಂದ ರೈತರಿಗೆ ಲಕ್ಷಾಂತರ ಹಣ ನಷ್ಟವಾಗಿದೆ’ ಎಂದರು.

‘ರೈತರು ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಬೇಕು. ಜಮೀನಿನ ಆರ್ಟಿಸಿ, ಬೆಳೆ ವಿಮೆ, ಫಸಲು ಹಾಳಾಗಿರುವ ಚಿತ್ರ ಹಾಗೂ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ಗಳನ್ನು ಕಚೇರಿಗೆ ನೀಡಬೇಕು. ಗ್ರಾಮಾಡಳಿತಾಧಿಕಾರಿಗಳಿಂದ ವರದಿ ತರಿಸಿಕೊಂಡು ಪರಿಹಾರ ಬರುವಂತೆ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು. ರೈತಸಂಘದ ಮಹದೇವಸ್ವಾಮಿ, ಮುಖಂಡರಾದ ಪುಟ್ಟಸ್ವಾಮಿ, ನಾಗರಾಜು, ನಂದೀಶ್, ಸೋಮಣ್ಣ, ಅಭಿಲಾಷ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-37-1556609615

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.