ಗುಂಡ್ಲುಪೇಟೆ: ಮಂಗಲ ಗ್ರಾಮದ ಮಾರಮ್ಮನ ದೇವಾಲಯದ ಸಮೀಪ ಖಾಸಗಿ ಜಮೀನಿನಲ್ಲಿ ಕಳೆಗಳಿಗೆ ಹಾಕಿದ್ದ ಬೆಂಕಿ ಬಂಡೀಪುರ ಅರಣ್ಯಕ್ಕೆ ವ್ಯಾಪಿಸಿದ್ದು, ಎಚ್ಚೆತ್ತ ಅರಣ್ಯ ಇಲಾಖೆ ಸಿಬ್ಬಂದಿ ಸಕಾಲದ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು.

ಮಧ್ಯಾಹ್ನ ಕಳೆಗಳಿಗೆ ಹಚ್ಚಿದ್ದ ಬೆಂಕಿ, ಗಾಳಿಯ ರಭಸಕ್ಕೆ ಗೋಪಾಲಸ್ವಾಮಿಬೆಟ್ಟ ವಲಯದ ಅರಣ್ಯದತ್ತ ವ್ಯಾಪಿಸುತ್ತಿತ್ತು. ಮೇಲುಕಾಮನಹಳ್ಳಿ ಅರಣ್ಯ ಇಲಾಖೆಯ ಕಂಟ್ರೋಲ್ ಅಂಡ್ ಕಮಾಂಡ್ ಸೆಂಟರಿನ ಸಿಬ್ಬಂದಿ ಬೆಂಕಿ ವ್ಯಾಪಿಸುತ್ತಿರುವುದನ್ನು ಗಮನಿಸಿ ಎಚ್ಚರಿಸಿದರು. ಸ್ಥಳಕ್ಕೆ ತೆರಳಿದ ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ ಎಂದು ಗೋಪಾಲಸ್ವಾಮಿ ಬೆಟ್ಟ ವಲಯದ ಆರ್ಎಫ್ಒ ಬಿ.ಎಂ.ಮಲ್ಲೇಶ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-37-720841412

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.