ಚಾಮರಾಜನಗರ: ‘ಬಂಜಾರದ ಸಮುದಾಯದ ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣ ನೀಡಲು ಸಮುದಾಯು ಮುಂದಾಗಬೇಕು’ ಎಂದು ಜಿಲ್ಲಾಧಿಕಾರಿ ಶ್ರೀರೂಪಾ ಸಲಹೆ ನೀಡಿದರು.

ತಾಲ್ಲೂಕಿನ ಮೂಕನಪಾಳ್ಯದಲ್ಲಿರುವ ಲಕ್ಷ್ಮೀದೇವಿ ಬಂಜಾರ ರಂಗಮಂದಿರದಲ್ಲಿ ಸೋಮವಾರ ಸಂತ ಸೇವಾಲಾಲ್ ಜಯಂತಿ ಅಂಗವಾಗಿ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ಸಂತ ಸೇವಾಲಾಲ್ ತತ್ವ, ಆದರ್ಶಗಳ ಚಿಂತನ-ಮಂಥನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸ್ಪರ್ಧಾತ್ಮಕ ಯುಗದಲ್ಲಿ ಉನ್ನತ ಹುದ್ದೆಗಳನ್ನು ಪಡೆಯಲು ಬಂಜಾರ ಸಮುದಾಯ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಬೇಕು, ಹೆಣ್ಣುಮಕ್ಕಳ ಶಿಕ್ಷಣಕ್ಕೆ ವಿಶೇಷ ಒತ್ತು ನೀಡಬೇಕು ಎಂದರು.

ಬಂಜಾರ ಸಮುದಾಯದ ಸಂಪ್ರಾದಾಯಿಕ ಕಲೆಗಳನ್ನು ಉಳಿಸಿ ಬೆಳಸಬೇಕಿದ್ದು, ಈ ನಿಟ್ಟಿನಲ್ಲಿ ಕಲೆಗಳ ಕುರಿತು ಯುವಜನತೆಗೆ ಜಾಗೃತಿ ಮೂಡಿಸಿ ಬಂಜಾರ ಸಂಸ್ಕೃತಿ ಉಳಿಸಲು ಕೈಜೋಡಿಸಬೇಕು. ನಶಿಸುತ್ತಿರುವ ಕಸೂತಿ ಕಲೆಗಳ ಪುನಶ್ಛೇತನಕ್ಕೆ ಜಿಲ್ಲಾಡಳಿತದಿಂದಲೂ ಅಗತ್ಯ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಸಂತ ಸೇವಾಲಾಲರು ಆಧ್ಯಾತ್ಮಿಕ ವಿಚಾರಧಾರೆಗಳ ಮೂಲಕ ಸಮಾಜ ಹಾಗೂ ಸಮುದಾಯದ ಉನ್ನತಿಗೆ ಶ್ರಮಿಸಿದರು. ಸೇವಾಲಾಲರ ಆದರ್ಶ ಹಾಗೂ ಆಧ್ಯಾತ್ಮಿಕ ಚಿಂತನೆಗಳನ್ನು ಮೈಗೂಡಿಸಿಕೊಂಡು ಸಮಾಜ ಮುನ್ನಡೆಯಬೇಕಿದೆ. ಪಾನ ಮುಕ್ತ ಸಮಾಜ ನಿರ್ಮಾಣ, ಮಹಿಳೆಯರಿಗೆ ಸಮಾನತೆಯ ಹಕ್ಕುಗಳು ಸಿಗಲು ಸಂತ ಸೇವಾಲಾಲರು ಶ್ರಮಿಸಿದ್ದರು ಎಂದರು.

ಪುಣಜನೂರು ಗ್ರಾಮದಲ್ಲಿ ಮೂಲಸೌಕರ್ಯಗಳ ಕೊರತೆ ಇರುವುದು ಗಮನಕ್ಕೆ ಬಂದಿದ್ದು ಶೀಘ್ರ ಸಮಸ್ಯೆ ಬಗೆಹರಿಸಲಾಗುವುದು. ಪುಣಜನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಲವು ಭಾಗಗಳಲ್ಲಿ ಕಂದಾಯ ಭೂಮಿಯಾಗಿ ಪರಿವರ್ತಿಸಬೇಕು ಎಂಬ ಈ ಭಾಗದ ಜನರ ಬಹುದಿನಗಳ ಬೇಡಿಕೆಯನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.

ಮೈಸೂರು ಅಬಕಾರಿ ಇಲಾಖೆಯ ಉಪ ಆಯುಕ್ತೆ ಡಾ.ಮಹದೇವಿ ಬಾಯಿ ಮಾತನಾಡಿ, ಬಂಜಾರ ಸಮುದಾಯದಲ್ಲಿ ಸಮಸ್ಯೆಗಳು ಗಂಭೀರವಾಗಿದ್ದು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ಸಿಗುತ್ತಿಲ್ಲ. ಎಸ್ಎಸ್ಎಲ್ಸಿ ಮುಗಿದ ಬಳಿಕ ಶಿಕ್ಷಣ ಮೊಟಕುಗೊಳಿಸುವುದು, 18 ವರ್ಷ ತುಂಬಿದ ಕೂಡಲೇ ಮದುವೆ ಮಾಡುವ ಪದ್ಧತಿಯನ್ನು ಬಿಡಬೇಕು. ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯಲು ಅವಕಾಶ ನೀಡಿದರೆ ಮಹಿಳಾ ಸ್ವಾವಲಂಬನೆ ಸಾಧ್ಯವಾಗಲಿದೆ, ಸಮಾಜವೂ ಉನ್ನತಿಯತ್ತ ಸಾಗಲಿದೆ ಎಂದರು.

ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ಸದಸ್ಯ ಸಂಚಾಲಕ ಜಿ.ಪಳನಿಸ್ವಾಮಿ ಜಾಗೇರಿ ಪ್ರಾಸ್ತಾವಿಕವಾಗಿ ಮಾತನಾಡಿ, ಬಂಜಾರ ಸಮುದಾಯದ ಸಂಸ್ಕೃತಿ ಹಾಗೂ ಭಾಷೆಯ ಉಳಿವಿಗೆ ರಾಜ್ಯ ಸರ್ಕಾರ ಅಕಾಡೆಮಿ ಸ್ಥಾಪಿಸಿ ಪ್ರೋತ್ಸಾಹಿಸುತ್ತಿದೆ. ಸಮುದಾಯದ ಜಾಗೃತಿಗಾಗಿ ಅಕಾಡೆಮಿ ರಾಜ್ಯದ ಉದ್ದಗಲಕ್ಕೂ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಎನ್.ರಾಜು, ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ರಾಜ್ಯ ಉಪಾಧ್ಯಕ್ಷ ಪಿ. ಕುಮಾರ ನಾಯಕ್, ಸಂಶೋಧಕ ಡಾ.ಗೋವಿಂದಸ್ವಾಮಿ, ಚಿಂತಕ ಯೋಗೇಶ್ ನಾಯಕ್, ಮೂಡಳ್ಳಿಯ ಹವ್ಯಾಸಿ ಬಳಗದ ಮೇಗ್ಯ ನಾಯಕ್, ಪಿ.ಎ.ಸಿ.ಸಿ ಸಹಕಾರ ಬ್ಯಾಂಕ್ ನಿರ್ದೇಶಕ ಪಿ.ಗಣೇಶ್ನಾಯಕ್, ಬಾಲಾಜಿ ನಾಯಕ್, ಗೋರ್ ಸಂಚಾಲಕ ಶಂಕರ್ ನಾಯಕ್, ಕರ್ನಾಟಕ ಪ್ರದೇಶ ಬಂಜಾರ ಸಮಾಜ ಸೇವಾ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಶಿವಾಜಿ, ಪುಣಜನೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಣಿನಾಯಕ್, ಉಪಾಧ್ಯಕ್ಷ ಉಮಾಶಂಕರ್, ಗುರುನಾಯಕ್, ಮುಖಂಡರಾದ ರಾಮಕೃಷ್ಣ, ಶಿವರಾಜು ನಾಯಕ್, ಉಲ್ಲೇಶ್ ನಾಯಕ್, ನಾಗೇಶ್ ನಾಯಕ್, ನಾಗ ನಾಯಕ್, ವೀರಯ್ಯನಪುರ ಶಿವುನಾಯಕ್, ರವಿನಾಯಕ್, ಮಹದೇವ ನಾಯಕ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-37-727285770

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.