ಚಾಮರಾಜನಗರ: ಜಿಲ್ಲಾ ಮಟ್ಟದ ಬಸವ ಜಯಂತ್ಯುತ್ಸವ ಹಾಗೂ ಶ್ರೀಗಳ ಸಂಸ್ಮರಣೋತ್ಸವ ಕಾರ್ಯಕ್ರಮ ಮೇ 21, 22 ರಂದು ಅದ್ದೂರಿಯಾಗಿ ನಡೆಯಲಿದೆ ಎಂದು ಸಿದ್ದಮಲ್ಲೇಶ್ವರ ವಿರಕ್ತ ಮಠದ ಅಧ್ಯಕ್ಷ ಚನ್ನಬಸವ ಸ್ವಾಮೀಜಿ ತಿಳಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರದ ಸಿದ್ದಮಲ್ಲೇಶ್ವರ ವಿರಕ್ತ ಮಠದ ಅವರಣದಲ್ಲಿ ಶ್ರೀಮಠ ಹಾಗೂ ಬಸವ ಬಳಗಗಳ ಒಕ್ಕೂಟದ ವತಿಯಿಂದ ಬಸವ ಜಯಂತ್ಯುತ್ಸವ ನಡೆಯಲಿದ್ದು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

21 ರಂದು ಸಂಜೆ ಮಠದ ಅವರಣದಲ್ಲಿ ಸಿದ್ದಮಲ್ಲೇಶ್ವರ ಕಲಾ ಬಳಗದ ವತಿಯಿಂದ ಪ್ರಭುಲಿಂಗಲೀಲೆ ನಾಟಕ ಪ್ರದರ್ಶನ ನಡೆಯಲಿದೆ. 22ರಂದು ಬೆಳಿಗ್ಗೆ 5 ಗಂಟೆಯಿಂದ ಪೂಜ್ಯರ ಗದ್ದುಗೆಗೆ ಬಿಲ್ವಾರ್ಚನೆ, ಮಹಾ ಮಂಗಳಾರತಿ, ಷಟ್ಸ್ಥಲ ಧ್ವಜಾರೋಹಣ, ಇಷ್ಟಲಿಂಗ ಪೂಜೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಬೆಳಿಗ್ಗೆ 11 ಗಂಟೆಗೆ ಪ್ರವಚನ ಹಾಗೂ ವಚನ ಗಾಯನ, ಭಕ್ತಿಗೀತೆಗಳ ಕಾರ್ಯಕ್ರಮಗಳು ನಡೆಯುತ್ತವೆ. ಎರಡು ದಿನಗಳ ಕಾಲ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಸುಮಾರು 25 ಸಾವಿರ ಜನ ಜಯಂತಿಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಬಸವ ಬಳಗಗಳ ಒಕ್ಕೂಟದ ಅಧ್ಯಕ್ಷ ಪಿ.ಮರಿಸ್ವಾಮಿ ನೇತೃತ್ವದಲ್ಲಿ ಬಸವೇಶ್ವರರ ಜಯಂತ್ಯುತ್ಸವದ ಮೆರವಣಿಗೆ ನಡೆಯಲಿದ್ದು, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಹಿತ ಮಠಾಧೀಶರು ಹಾಗೂ ಗಣ್ಯರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ ಎಂದರು.

ಬಸವ ಬಳಗಗಳ ಒಕ್ಕೂಟದ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, 22 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರುವ ಬಸವೇಶ್ವರ ಪುತ್ಥಳಿಗೆ ಸುತ್ತೂರು ಶ್ರೀಗಳು ಮಾರ್ಲಾಪಣೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ದೊರೆಯಲಿದೆ. ಬಿ.ರಾಚಯ್ಯ ಜೋಡಿ ರಸ್ತೆ, ತ್ಯಾಗರಾಜ ರಸ್ತೆ ಮಾರಮ್ಮನಗುಡಿ ಬೀದಿ, ಸಂತೇಮರಹಳ್ಳಿ ಸರ್ಕಲ್ ಮಾರ್ಗವಾಗಿ ಮೆರವಣಿಗೆ ಶ್ರೀಮಠ ತಲುಪಲಿದೆ. ಸಾವಿರಾರು ಮಂದಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಠಾಧೀಶರು, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಭಾಗವಹಿಸಲಿದ್ದಾರೆ. ಬಸವ ಭಕ್ತರು, ಬಸವ ತತ್ವ ಅನುಯಾಯಿಗಳು, ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-37-68291460

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.