ಚಾಮರಾಜನಗರ: ರಾಮಸಮುದ್ರದಲ್ಲಿರುವ ಗುರು ಕಂಬಳೇಶ್ವರ ಭಿಕ್ಷದ ಮಠ ಹಾಗೂ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಶನಿವಾರ ಬಸವ ಜಯಂತ್ಯುತ್ಸವದ ಅದ್ದೂರಿ ಮೆರವಣಿಗೆ ನಡೆಯಿತು.

ನಗರದ ಸಿದ್ದ ಮಲ್ಲೇಶ್ವರ ವಿರಕ್ತ ಮಠದ ಚನ್ನಬಸವ ಸ್ವಾಮೀಜಿ ಮೆರವಣಿಗೆಗೆ ಚಾಲನೆ ನೀಡಿದರು. ಜಗಜ್ಯೋತಿ ಬಸವೇಶ್ವರರ ಭಾವಚಿತ್ರದೊಂದಿಗೆ ಮೆರವಣಿಗೆ ರಾಮಸಮುದ್ರ ಗ್ರಾಮದಲ್ಲಿ ಸಂಚರಿಸಿತು. ನಾದಸ್ವರ, ವೀರಭದ್ರ ಕುಣಿತ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಭಾಗವಹಿಸಿದ್ದವು. ಜೋಡಿ ಎತ್ತುಗಳ ಮೆರವಣಿಗೆ ಗಮನ ಸೆಳೆಯಿತು.

ಗ್ರಾಮದ ಬಸವನಿಗೆ ಮಹಾ ಮಂಗಳಾರತಿ ಮಾಡಿ ಹಣ್ಣು-ಕಾಯಿ ನೈವೇದ್ಯ ಸಮರ್ಪಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ರಾಮಸಮುದ್ರ ಮಠದ ಮಹದೇವ ಸ್ವಾಮೀಜಿ, ವೀರಶೈವ ಲಿಂಗಾಯತ ಸಮುದಾಯದ ಮುಖಂಡರು, ಯಜಮಾನರು, ಶರಣ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದ ಬಳಿಕ ಪ್ರಸಾದ ವಿನಿಯೋಗ ಮಾಡಲಾಯಿತು. ಮೇ 24ರಂದು ಧಾರ್ಮಿಕ ಸಭೆ, ಗುರು ವಂದನೆ, ಪಾದಪೂಜೆ, ನುಡಿ ನಮನ ಕಾರ್ಯಕ್ರಮ ನಡೆಯಲಿದೆ. ಬಸವ ಮಂದಿರದ 12ನೇ ವಾರ್ಷಿಕೋತ್ಸವ ಮತ್ತು ಭಿಕ್ಷದ ಮಠದ 30ನೇ ವಾರ್ಷಿಕೋತ್ಸವ ಕಾರ್ಯಕ್ರಮಗಳು ನಡೆಯಲಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-37-960777063

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.