ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಸಂಯುಕ್ತ ಆಶ್ರಯದಲ್ಲಿ ವಿಶ್ವಗುರು ಬಸವೇಶ್ವರರ ಜಯಂತಿ ಅಂಗವಾಗಿ ಏ.20ರಂದು ನಗರದಲ್ಲಿ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಬಸವೇಶ್ವರ ಪುತ್ಥಳಿಗೆ ಪುಷ್ಪಾರ್ಚನೆ ಮಾಡಲಾಗುವುದು. ಬೆಳಿಗ್ಗೆ 11 ಗಂಟೆಗೆ ವರನಟ ಡಾ.ರಾಜ್ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ವಿಚಾರ ಸಂಕಿರಣ ನಡೆಯಲಿದೆ.

ಹರವೆ ವಿರಕ್ತ ಮಠದ ಸರ್ಪಭೂಷಣ ಸ್ವಾಮಿ, ಮರಿಯಾಲದ ಮುರುಘ ರಾಜೇಂದ್ರ ಸ್ವಾಮಿ ಮಹಾ ಸಂಸ್ಥಾನ ಮಠದ ಇಮ್ಮಡಿ ಮುರುಘ ರಾಜೇಂದ್ರ ಸ್ವಾಮಿ ಹಾಗೂ ಚಾಮರಾಜನಗರದ ಸಿದ್ದಮಲ್ಲೇಶ್ವರ ವಿರಕ್ತ ಮಠದ ಚನ್ನಬಸವ ಸ್ವಾಮಿ ಸಾನಿಧ್ಯ ವಹಿಸುವರು.

ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯ ಸುನೀಲ್ ಬೋಸ್ ಉಪಸ್ಥಿತರಿರುವರು.

ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸ ಲಿದ್ದಾರೆ. ಚಿಂತಕ ಪೃಥ್ವಿರಾಜ್ ಹಾಲಹಳ್ಳಿ, ಬಸವತತ್ವ ಪ್ರಚಾರಕ ಎಲ್.ಬಸಪ್ಪ ಬೊಮ್ಮಲಾಪುರ ಬಸವಣ್ಣ ಮುಖ್ಯ ಭಾಷಣ ಮಾಡುವರು. ಭಜನಾ ಕಲಾ ತಂಡಗಳಿಂದ ವಚನಗಾಯನ ಏರ್ಪಡಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-37-1458831144

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.