ಮಹದೇಶ್ವರ ಬೆಟ್ಟ: ಬೇಡಗಂಪಣ ಸಮುದಾಯದ ಜನತೆ ಇಂದಿಗೂ ಮೂಲಸೌಲಭ್ಯಗಳಿಲ್ಲದೆ ಬದುಕುತ್ತಿರುವುದು ಅತ್ಯಂತ ನೋವಿನ ಸಂಗತಿ ಎಂದು ಸಾಲೂರು ಬೃಹನ್ಮಠದ ಪೀಠಾಧ್ಯಕ್ಷ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ತಿಳಿಸಿದರು.

ಮಹದೇಶ್ವರ ಬೆಟ್ಟದಲ್ಲಿ ಹಮ್ಮಿಕೊಂಡಿದ್ದ ಬೇಡರ ಕಣ್ಣಪ್ಪ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು, ಬೇಡರ ಕಣ್ಣಪ್ಪನ ಜನಾಂಗದವರು ಎನಿಸಿಕೊಂಡಿರುವ ಬೇಡಗಂಪಣರು ಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬದುಕು ಕಟ್ಟಿಕೊಂಡಿದ್ದಾರೆ. ಇಂದಿಗೂ ಬೇಡಗಂಪಣರು ವಾಸವಿರುವ ಗ್ರಾಮಗಳಲ್ಲಿ ಕನಿಷ್ಠ ಮೂಲಸೌಲಭ್ಯಗಳು ಇಲ್ಲದೆ ಅಭಿವೃದ್ಧಿ ಕಂಡಿಲ್ಲ ಎಂದರು.

ಮಲೆ ಮಹದೇಶ್ವರ ಬೆಟ್ಟದ ಬೇಡಗಂಪಣ ಸಮುದಾಯದ ಅರ್ಚಕರ ಸಂಘದ ಅಧ್ಯಕ್ಷ ಪುಟ್ಟಣ್ಣ ಮಾಸ್ಟರ್ ಮಾತನಾಡಿ ‘ಪ್ರತಿ ವರ್ಷ ಯುಗಾದಿ ಹಬ್ಬದ ನಂತರ ಬೇಡರ ಕಣ್ಣಪ್ಪನ ಜಯಂತಿ ಮಹೋತ್ಸವವನ್ನು ಸಮುದಾಯ ವಿಜೃಂಭಣೆಯಿಂದ ಆಚರಿಸಿಕೊಂಡು ಬಂದಿದೆ. ಬೇಡಗಂಪಣ ಸಮುದಾಯಕ್ಕೆ ಇಂದಿಗೂ ಜಾತಿ ಪ್ರಮಾಣ ಪತ್ರ ದೊರಕದಿರುವುದು ದುರದೃಷ್ಟಕರ.

ಸಮುದಾಯ ಬದುಕುತ್ತಿರುವ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆ, ವಿದ್ಯುತ್ ಹಾಗೂ ಆರೋಗ್ಯ ಸೌಲಭ್ಯಗಳು ಗ್ರಾಮಗಳಿಗೆ ಸಿಗದೆ ಸಮಸ್ಯೆ ಅನುಭವಿಸುತ್ತಿದ್ದೇವೆ. ರಾಜ್ಯ ಸರ್ಕಾರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಮನವಿ ಮಾಡಿದರು.

ಮಾಜಿ ಶಾಸಕ ಆರ್ ನರೇಂದ್ರ, ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ.ರಘು, ಬೇಡಗಂಪಣ ಸಮುದಾಯದ ಅಧ್ಯಕ್ಷ ಮಹದೇವಸ್ವಾಮಿ, ಮುಖಂಡರಾದ ಮುರುಗೇಶ್ ಮಾದೇಶ್, ನಾಗಪ್ಪ, ಪುಟ್ಟಸ್ವಾಮಿ, ಶಿವಣ್ಣ ತಮ್ಮಡಿ, ಕೆ.ಟಿ.ಪುಟ್ಟಪ್ಪ, ಅಣ್ಣಯ್ಯ ತಮ್ಮಡಿ, ಚಂದ್ರು, ಶೇಖರ್ ಜಿ, ಮಹೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-37-1788345148

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.