ಚಾಮರಾಜನಗರ: ಪೂರ್ವಜರ ಮೋಕ್ಷ ಪ್ರಾಪ್ತಿಗಾಗಿ ಸಾಕ್ಷಾತ್ ಗಂಗೆಯನ್ನೇ ಧರೆಗಿಳಿಸಿದ ಮಹಾನ್ ಪುರುಷ ಭಗೀರಥ ಮಹರ್ಷಿ ಎಂದು ಎಂ.ಎಸ್.ಐ.ಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಭಗೀರಥರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಪೂರ್ವಜರ ಬಗ್ಗೆ ಅಪಾರ ಗೌರವ ಹೊಂದಿದ್ದ ಮಹರ್ಷಿ ಭಗೀರಥರು ಕಠಿಣ ತಪಸ್ಸು ಮಾಡುವ ಮೂಲಕ ದೇವಾನುದೇವತೆಗಳನ್ನು ಸಂತೃಪ್ತಪಡಿಸಿದರು. ಭಗೀರಥರ ಕಠಿಣ ತಪ್ಪಸ್ಸು ಇಂದಿಗೂ ಭಗೀರಥರ ಪ್ರಯತ್ನ ಎಂದೇ ಆಡುಭಾಷೆಯಲ್ಲಿ ಚಾಲ್ತಿಯಲ್ಲಿದೆ. ಭಗೀರಥರು ಪುರಾಣ ಕಾಲಘಟ್ಟದ ವ್ಯಕ್ತಿಯಾಗಿದ್ದು ಅವರ ಆದರ್ಶ ಮೌಲ್ಯಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದರು.

ಭಗೀರಥರು ಹಾಗೂ ಅವರ ವಂಶಸ್ಥರು ಉಪ್ಪು ತಯಾರಿಸುವ ವೃತ್ತಿ ಮಾಡುತ್ತಿದ್ದರು. ಬ್ರಿಟಿಷರ ವ್ಯತಿರಿಕ್ತ ನೀತಿಗಳಿಂದ ಉಪ್ಪಾರ ಸಮುದಾಯ ಬೇರೆ ವೃತ್ತಿಗಳತ್ತ ಹೊರಳಿತು ಎಂದರು.

ಭಗೀರಥರ ಜಯಂತಿಯನ್ನು ಸರಳವಾಗಿ ಆಚರಿಸಲಾಗಿದ್ದು ಶೀಘ್ರ ಪ್ರತ್ಯೇಕ ದಿನಾಂಕ ನಿಗದಿಗೊಳಿಸಿ ಚಾಮರಾಜನಗರದಲ್ಲಿ ರಾಜ್ಯಮಟ್ಟದ ಭಗೀರಥ ಜಯಂತಿ ಆಯೋಜಿಸಲಾಗುವುದು. ಸಮುದಾಯದ ಸಮಸ್ಯೆಗಳನ್ನು ಸಮಾವೇಶದಲ್ಲಿ ಚರ್ಚಿಸಲಾಗುವುದು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹರ್ಷಿ ಭಗೀರಥರ ಕುರಿತು ಉಪನ್ಯಾಸ ನೀಡಿದ ನಾಗವಳ್ಳಿಯ ಸೋಮಣ್ಣ ‘ಭಗೀರಥರ ಜಯಂತಿ ಭೂಮಿಗೆ ಗಂಗಾವಾತರಣೆಯಾದ ಪುಣ್ಯದಿನವಾಗಿದೆ. ಸಾವಿರ ವರ್ಷಗಳ ಕಾಲ ತಪಗೈದು ಗಂಗೆಯನ್ನು ಭೂಮಿಗೆ ಕರೆತಂದ ಮಹಾನ್ ಸಿದ್ಧಿಪುರುಷರಾದ ಭಗೀರಥರು ಎಲ್ಲರಿಗೂ ಆದರ್ಶ ಹಾಗೂ ಪ್ರೇರಣೆಯಾಗಲಿ ಎಂದರು.

ಉಪ್ಪಾರ ಸಮುದಾಯ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಬೇಕಿದೆ, ಸಮುದಾಯದ ಪೋಷಕರು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಬೇಕು, ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಅಭಿವೃದ್ಧಿ ಹೊಂದಬೇಕು, ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯದಂತೆ ಸಮಾಜ ಮುಂದುವರಿಯಬೇಕು ಎಂದರು.

ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾಧ್ಯಕ್ಷ ಎಚ್.ವಿ.ಚಂದ್ರು, ಚೂಡಾ ಅಧ್ಯಕ್ಷ ಮಹಮದ್ ಅಸ್ಗರ್, ಜಿಲ್ಲಾಧಿಕಾರಿ ಶ್ರೀರೂಪಾ, ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಮುತ್ತುರಾಜ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜು, ಜಿಲ್ಲಾಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರು, ಸಂಘಸಂಸ್ಥೆಗಳ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-37-570378730

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.