ಚಾಮರಾಜನಗರ: ಮಹಿಳಾ ಮೀಸಲಾತಿ ಕಾಯ್ದೆಯ ಜಾರಿಗೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ಮಹಿಳಾ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಭುವನೇಶ್ವರಿ ವೃತ್ತ ತಲುಪಿ ರಸ್ತೆ ತಡೆ ನಡೆಸಿ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡೆ ಡಾ.ಎಚ್.ಎಂ.ನಿರ್ಮಲಾ ಮಾತನಾಡಿ, ಸ್ವಾತಂತ್ರ್ಯ ಬಂದು 7 ದಶಕಗಳು ಕಳೆದರೂ ಸಮಾನತೆಗೆ, ಮೀಸಲಾತಿಗೆ ಮಹಿಳೆಯರು ಅಂಗಲಾಚುವ ಪರಿಸ್ಥಿತಿ ಇರುವುದು ದುರಂತ. ದೇಶದ ಜನಸಂಖ್ಯೆಯ ಅರ್ಧದಷ್ಟಿದ್ದರೂ ಮಹಿಳೆಯರು ರಾಜಕೀಯ ಹಕ್ಕುಗಳಿಗೆ ಹೋರಾಟ ಮಾಡಬೇಕಾಗಿದೆ. ಅಂಬೇಡ್ಕರ್ ಮಹಿಳಾ ಪರವಾದ ಆಶಯಗಳನ್ನು ಕಾಂಗ್ರೆಸ್ ಪಕ್ಷ ಮಣ್ಣುಪಾಲು ಮಾಡುತ್ತಿದೆ ಎಂದು ಆರೋಪಿಸಿದರು.

ಮಹಿಳೆಯರಿಗೆ ಮೀಸಲಾತಿ ನೀಡುವ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಮಿತ್ರಪಕ್ಷಗಳು ಹಿಂದಿನಿಂದಲೂ ವಿರೋಧ ಮಾಡಿಕೊಂಡು ಬಂದಿದ್ದಾರೆ. 2023ರಲ್ಲಿ ಮಹಿಳಾ ಮೀಸಲಾತಿ ಬಿಲ್ ಪಾಸ್ ಆಗಿದ್ದರೂ ಜಾರಿ ಮಾಡಲು ಕಾಂಗ್ರೆಸ್ ಅಡ್ಡಗಾಲು ಹಾಕಿರುವುದು ಖಂಡನೀಯ. ಮಹಿಳಾ ವಿರೋಧಿ ಧೋರಣೆ ಅನುಸರಿಸುತ್ತಿರುವ ಕಾಂಗ್ರೆಸ್ಗೆ ಮುಂದಿನ ಚುನಾವಣೆಯಲ್ಲಿ ಮಹಿಳಾ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಕ್ಷೇತ್ರ ಪುನರ್ವಿಂಗಡಣೆಯ ಅನುಸಾರ ಮಹಿಳಾ ಮೀಸಲಾತಿ ಕಾಯ್ದೆ ಜಾರಿ ಮಾಡುವುದಕ್ಕೆ ಹಿಂದೆ ಎಲ್ಲ ಪಕ್ಷಗಳು ಒಪ್ಪಿಕೊಂಡು ಈಗ ತಗಾದೆ ತೆಗೆಯುತ್ತಿರುವುದು ಖಂಡನೀಯ. ಮಹಿಳೆಯ ಸಾಮರ್ಥ್ಯಕ್ಕೆ ವೇದಿಕೆ ನೀಡದ, ಅವಕಾಶಗಳನ್ನು ಕಸಿಯುತ್ತಿರುವ ಕಾಂಗ್ರೆಸ್ ಹಾಗೂ ಮಿತ್ರಪಕ್ಷಗಳ ನಡೆ ಖಂಡನೀಯ ಎಂದು ಟೀಕಿಸಿದರು.

ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಲೆಯೂರು ಕಮಲಮ್ಮ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಮಹಿಳೆಯರ ಬಗ್ಗೆ ಕಾಳಜಿ ಇಲ್ಲವಾಗಿದ್ದು ಸಂಸತ್ನಲ್ಲಿ ಮಹಿಳಾ ಮೀಸಲಾತಿ ಕಾಯ್ದೆಗೆ ಸೋಲಾಗುವಂತೆ ಮಾಡಿದೆ. ಕಾಂಗ್ರೆಸ್ ಸಂಸದರಿಗೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಮಹಿಳಾ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಶೈಲಾ, ಮಹಿಳಾ ಮೋರ್ಚಾದ ಜಿಲ್ಲಾ ಪ್ರಭಾರಿ ರೂಪೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊನ್ನೂರು ಮಹದೇವಸ್ವಾಮಿ, ಜಿಲ್ಲಾ ಉಪಾದ್ಯಕ್ಷ ರೇವಣ್ಣ, ಸಂತೇಮಹಳ್ಳಿ ರವೀಶ್, ಗ್ರಾಮಾಂತರ ಮಂಡಲದ ಅಧ್ಯಕ್ಷ ಕಾಡಹಳ್ಳಿ ಕುಮಾರ್, ನಗರ ಘಟಕದ ಅಧ್ಯಕ್ಷ ಶಿವರಾಜ್, ಜಿಲ್ಲಾ ಉಪಾಧ್ಯಕ್ಷರಾದ ಕುಮಚಹಳ್ಳಿ ಪಾರ್ವತಮ್ಮ, ರಾಜೇಶ್ವರಿ, ಸರೋಜ, ಎಲ್. ಕವಿತಾ, ಗ್ರಾಮಾಂತರ ಮಂಡಲದ ಅಧ್ಯಕ್ಷೆ ಉಷಾ ಪ್ರತಿಭಟನೆಯಲ್ಲಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-37-1910987539

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.