ಚಾಮರಾಜನಗರ: ಅಂತರ್ಜಲ ಸಂಪನ್ಮೂಲಗಳ ಮೌಲೀಕರಣ ಮಾರ್ಚ್-2024ರ ವರದಿಯನುಸಾರ ಚಾಮರಾಜನಗರ ಮತ್ತು ಗುಂಡ್ಲುಪೇಟೆ ತಾಲ್ಲೂಕುಗಳು ಅಂತರ್ಜಲ ಅತಿ ಬಳಕೆಯ ತಾಲ್ಲೂಕುಗಳು ಎಂದು ಅಧಿಸೂಚಿತವಾಗಿದ್ದು ಕರ್ನಾಟಕ ಅಂತರ್ಜಲ ಅಧಿನಿಯಮ ಹಾಗೂ ನಿಯಮಾವಳಿಯ ಪ್ರಕಾರ ಹೊಸದಾಗಿ ಕೊಳವೆಬಾವಿ ಕೊರೆಯಲು ಜಿಲ್ಲಾ ಅಂತರ್ಜಲ ಸಮಿತಿಯಿಂದ ಅನುಮತಿ ಪಡೆಯಬೇಕು, ಅಂತರ್ಜಲ ಬಳಕೆದಾರರು ಪ್ರಾಧಿಕಾರದಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪಾ ತಿಳಿಸಿದ್ದಾರೆ.

ಕೃಷಿ, ತೋಟಗಾರಿಕೆ, ಕುಡಿಯುವ ನೀರಿನ ಹಾಗೂ ಇತರೆ ಉದ್ದೇಶಗಳಿಗೆ ಕೊಳವೆಬಾವಿ ಕೊರೆಸುವವರು ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ ಮತ್ತು ನಗರಸಭೆಗಳಿಂದ ಕಡ್ಡಾಯವಾಗಿ ದೃಢೀಕರಣ ಪತ್ರ ಪಡೆದು, ಹೊಸ ಕೊಳವೆಬಾವಿ ಸ್ಥಳ ಆಯ್ಕೆಗಾಗಿ ಜಿಲ್ಲಾ ಅಂತರ್ಜಲ ಕಚೇರಿಗೆ ಅರ್ಜಿ ಸಲ್ಲಿಸಬೇಕು.

ಅಧಿಸೂಚಿತ ಮತ್ತು ಅಧಿಸೂಚಿತವಲ್ಲದ ಪ್ರದೇಶಗಳಲ್ಲಿರುವ ಕೈಗಾರಿಕೆ, ವಾಣಿಜ್ಯ, ಮೂಲಸೌಕರ್ಯ ಅಭಿವೃದ್ಧಿ, ಗಣಿಗಾರಿಕೆ, ಮನೋರಂಜನೆ ಘಟಕಗಳು ಅಂತರ್ಜಲವನ್ನು ಬಳಸಲು ರಾಜ್ಯ ಅಂತರ್ಜಲ ಪ್ರಾಧಿಕಾರ, ಜಿಲ್ಲಾ ಅಂತರ್ಜಲ ಪ್ರಾಧಿಕಾರದಿಂದ ಕಡ್ಡಾಯವಾಗಿ ಅನುಮತಿ, ನಿರಾಕ್ಷೇಪಣಾ ಪತ್ರ ಪಡೆದುಕೊಳ್ಳಬೇಕು. ತಪ್ಪಿದ್ದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಕೊಳವೆಬಾವಿ ಕೊರೆಯುವ ರಿಗ್ ಯಂತ್ರಗಳ ಮಾಲೀಕರು, ಏಜೆನ್ಸಿಯವರು ಕಡ್ಡಾಯವಾಗಿ ಕರ್ನಾಟಕ ಅಂತರ್ಜಲ ಪ್ರಾಧಿಕಾರದಲ್ಲಿ ನೋಂದಾಯಿಸಿಕೊಂಡು ನಮೂನೆ 7 ಎ ಪಡೆದು ಕೊಳವೆಬಾವಿ ಕೊರೆಯುವ ಕೆಲಸ ನಿರ್ವಹಿಸಬೇಕು. ಅನಧಿಕೃತವಾಗಿ ಕೊಳವೆಬಾವಿ ಕೊರೆದರೆ 25000ದವರೆಗೆ ದಂಡ ವಿಧಿಸಲಾಗುವುದ.

ವಿಫಲ ಮತ್ತು ತೆರೆದ ಕೊಳವೆಬಾವಿಗಳಲ್ಲಿ ಮಕ್ಕಳು ಬೀಳುವ ಅಪಾಯ ಇರುವುದರಿಂದ ಕೊಳವೆ ಬಾವಿ ಕೊರೆಯುವ ಏಜೆನ್ಸಿ, ಅನುಷ್ಠಾನ ಏಜೆನ್ಸಿ ಮತ್ತು ಭೂ ಮಾಲೀಕರು ಕೊಳವೆಬಾವಿ ಕೊರೆಯುವ 15 ದಿನ ಮುಂಚಿತವಾಗಿ ಸ್ಥಳೀಯ ಪ್ರಾಧಿಕಾರಕ್ಕೆ ಅಥವಾ ನಗರ ಸ್ಥಳೀಯ ಸಂಸ್ಥೆಗೆ ಲಿಖಿತವಾಗಿ ತಿಳಿಸಬೇಕು.

ಗ್ರಾಮೀಣ ಮತ್ತು ನಗರ ಪ್ರದೇಶಗಳ ಸ್ಥಳೀಯ ಪ್ರಾಧಿಕಾರಗಳು, ಸ್ಥಳೀಯ ಪ್ರದೇಶಗಳಲ್ಲಿ ಕೊರೆಸಲಾದ ಕೊರೆಬಾವಿ, ಕೊಳವೆಬಾವಿಗಳ ಮೇಲೆ ನಿಗಾ ಇಡಬೇಕು. ನಿಷ್ಕ್ರಿಯ ಕೊಳವೆಬಾವಿಗಳನ್ನು ಮುಚ್ಚಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಅಂತರ್ಜಲ ಬಳಕೆ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಮುಂದೆ ಅಂತರ್ಜಲ ಕೊರತೆ ತೀವ್ರವಾಗಲಿದೆ. ಈ ನಿಟ್ಟಿನಲ್ಲಿ ಸರ್ಕಾರಿ, ನಿಗಮ, ಮಂಡಳಿ, ಅರೆ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳ ಕಟ್ಟಡಗಳಲ್ಲಿ ಮಳೆನೀರು ಸಂಗ್ರಹ ಪದ್ದರತಿ ಅಳವಡಿಸಿಕೊಳ್ಳಬೇಕು. ಜಮೀನುಗಳಲ್ಲಿ ಮಳೆ ನೀರನ್ನು ಭೂಮಿಗೆ ಇಂಗಿಸಿ ಅಂತರ್ಜಲ ವೃದ್ಧಿಸಬೇಕು.

ತುಂತುರು ಮತ್ತು ಹನಿ ನೀರಾವರಿ ಪದ್ಧತಿ ಬಳಕೆ ಮಾಡಬೇಕು, ಕೈಗಾರಿಕೆ, ವಾಣಿಜ್ಯ ಮತ್ತು ಮನೋರಂಜನಾ ಘಟಕಗಳು ಮಳೆ ನೀರು ಸಂಗ್ರಹಿಸಿ ಬಳಸಬೇಕು. ತ್ಯಾಜ್ಯ ನೀರನ್ನು ಶುದ್ದೀಕರಿಸಿ ಮರು ಬಳಕೆ ಮಾಡಬೇಕು. ಹೆಚ್ಚಿನ ಮಾಹಿತಿಗೆ ಭ್ರಮರಾಂಭ ಬಡಾವಣೆಯಲ್ಲಿರುವ ಅಂತರ್ಜಲ ನಿರ್ದೇಶನಾಲಯದ ಜಿಲ್ಲಾ ಅಂತರ್ಜಲ ಕಚೇರಿಯ ಹಿರಿಯ ಭೂವಿಜ್ಞಾನಿ ಅವರನ್ನು (08226-225288) ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಶ್ರೀರೂಪಾ ಅವರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-37-1890436378

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.