ಚಾಮರಾಜನಗರ: ನಗರಸಭೆಯಲ್ಲಿ ಇ–ಸ್ವತ್ತು ಮಾಡಿಕೊಡಲು ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳು ಹಾಗೂ ಒಬ್ಬ ಮಧ್ಯವರ್ತಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಕಂದಾಯ ಅಧಿಕಾರಿ ಹೇಮಂತ್ ಕುಮಾರ್, ಕಂದಾಯ ನಿರೀಕ್ಷಕ ಶಕೀಲ್ ಅಹಮದ್ ಹಾಗೂ ಮಧ್ಯವರ್ತಿ ಹಬೀಬ್ ಲೋಕಾಯುಕ್ತ ಬಲೆಗೆ ಬಿದ್ದವರು.

ಪ್ರಕರಣದ ವಿವರ: ಮೀಸೆ ನಾಗರಾಜು ಎಂಬುವರಿಗೆ ಅವರ ನಿವೇಶನದ ಇ– ಸ್ವತ್ತು ಮಾಡಿಕೊಡಲು, ಕಂದಾಯ ಅಧಿಕಾರಿ ಹೇಮಂತ್ ಕುಮಾರ್ ಹಾಗೂ ಕಂದಾಯ ನಿರೀಕ್ಷಕ ಶಕೀಲ್ ಅಹಮದ್ ₹25ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಬಳಿಕ ಮಧ್ಯವರ್ತಿ ಹಬೀಬ್ಗೆ ಹಣ ನೀಡುವಂತೆ ಸೂಚನೆ ನೀಡಿದ್ದರು. ಈ ಸಂಬಂಧ ನಾಗರಾಜ್ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಅದರಂತೆ ದೂರುದಾರರು ಮಧ್ಯವರ್ತಿ ಹಬೀಬ್ಗೆ ಹಣ ನೀಡುವಾಗ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಮೂವರು ಆರೋಪಿಗಳನ್ನು ಹಣದ ಸಮೇತ ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಲೋಕಾಯುಕ್ತ ಡಿವೈಎಸ್ಪಿ ಗಜೇಂದ್ರ ಪ್ರಸಾದ್ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಲೋಹಿತ್ ಕುಮಾರ್ ಹಾಗೂ ತಂಡ ಕಾರ್ಯಾಚರಣೆ ನಡೆಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-51-1399506344

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.