ಚಾಮರಾಜನಗರ: ಸ್ತ್ರೀ ಸೌಖ್ಯ ಕಾರ್ಯಕ್ರಮದಡಿ ಮಹಿಳೆಯರಲ್ಲಿ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಿ ಆರಂಭದಲ್ಲಿ ರೋಗ ಪತ್ತೆಹಚ್ಚಿ ಚಿಕಿತ್ಸೆ ನೀಡಲು ಆಯೋಜಿಸಿರುವ ಕ್ಯಾನ್ಸರ್ ತಪಾಸಣಾ ಶಿಬಿರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಭೇಟಿನೀಡಿ ಪರಿಶೀಲಿಸಿದರು.

ತಾಲ್ಲೂಕಿನ ಕಾಗಲವಾಡಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಸಹಯೋಗದಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರ ಆಯೋಜಿಸಲಾಗಿದೆ.

ಶಿಬಿರಕ್ಕೆ ಭೇಟಿನೀಡಿದ ಸಚಿವರು ಇದುವರೆಗೂ ಎಷ್ಟು ಮಂದಿ ನೋಂದಾಯಿಸಿಕೊಂಡಿದ್ದು ತಪಾಸಣೆಗೆ ಒಳಗಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಕಾರ್ಯಕ್ರಮದ ಲಾಭಗಳೇನು ಎಂದು ವೈದ್ಯರಿಂದ ಸಚಿವರು ಮಾಹಿತಿ ಪಡೆದುಕೊಂಡರು.

ಜಿಲ್ಲಾಧಿಕಾರಿ ಶ್ರೀರೂಪ ಮಾತನಾಡಿ, ಮಹಿಳೆಯರಿಗೆ ಗರ್ಭಕಂಠ ಕ್ಯಾನ್ಸರ್, ಸ್ತನ ಕ್ಯಾನ್ಸರ್ ತಪಾಸಣೆ ನಡೆಯುತ್ತಿದೆ. ಪುರುಷರಿಗೆ ಬಾಯಿ ಕ್ಯಾನ್ಸರ್ ತಪಾಸಣೆ ಮಾಡಲಾಗುತ್ತಿದೆ. ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಸಂಚಾರಿ ಮೊಬೈಲ್ ಕ್ಯಾನ್ಸರ್ ತಪಾಸಣಾ ಘಟಕದಲ್ಲಿರುವ ವೈದ್ಯರು ಹಾಗೂ ಸಿಬ್ಬಂದಿ ಸ್ಥಳಕ್ಕೆ ಬಂದು ತಪಾಸಣೆ ನಡೆಸುತ್ತಾರೆ. ಅಗತ್ಯ ಪರಿಕರಗಳು ಇಲ್ಲಿ ಲಭ್ಯವಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಚಿದಂಬರ ತಪಾಸಣಾ ಶಿಬಿರ, ಪರೀಕ್ಷೆ, ಔಷದ ಹಾಗೂ ಚಿಕಿತ್ಸಾ ವಿಧಾನಗಳ ಕುರಿತು ಸಚಿವರಿಗೆ ಮಾಹಿತಿ ನೀಡಿದರು. ಕ್ಯಾನ್ಸರ್ ತಪಾಸಣೆಗೆ ಜಿಲ್ಲೆಯು ವಿಶೇಷವಾಗಿ ರೂಪಿಸಿರುವ ಸ್ತ್ರೀಸೌಖ್ಯ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಸಚಿವರು ಹಾರೈಸಿದರು.

ಕಾಗಲವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿನೀಡಿ ಸಾರ್ವಜನಿಕರೊಂದಿಗೂ ಆರೋಗ್ಯ ಸೇವೆಯ ಕುರಿತು ಅಭಿಪ್ರಾಯ ಆಲಿಸಿದರು. ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ತಹಶೀಲ್ದಾರ್ ಗಿರಿಜಾ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿವಾರಣಾಧಿಕಾರಿ ಡಾ.ಪಿ.ಚಂದ್ರಶೇಖರ್, ಜಿಲ್ಲಾ ಕಾರ್ಯಕ್ರಮ ಅಭಿವೃದ್ದಿ ಅಧಿಕಾರಿ ಡಾ. ರಾಜೇಶ್ ಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಜನಾರ್ಧನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-37-945161619

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.