ಬೆಂಗಳೂರು: ಚಾಕು ಬಿಸಿ ಮಾಡಿ ತಮ್ಮ ಮಕ್ಕಳ ಕೈ-ಕಾಲು ಹಾಗೂ ಬೆನ್ನಿಗೆ ಬರೆಯಿಟ್ಟ ಮತ್ತು ಬಾಸುಂಡೆ ಬರುವಂತೆ ಕೋಲಿನಿಂದ ಹೊಡೆದ ಪ್ರಕರಣವೊಂದರಲ್ಲಿ ಮಕ್ಕಳನ್ನು ಹೆತ್ತ ತಾಯಿ, ಮಲತಂದೆ, ಅಜ್ಜಿ-ತಾತನಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ನಿರೀಕ್ಷಣಾ ಜಾಮೀನು ಕೋರಿ ಚಾಮರಾಜನಗರ ತಾಲ್ಲೂಕಿನ ಕಳ್ಳೀಪುರ ನಿವಾಸಿಗಳಾದ ಮಕ್ಕಳ ತಾಯಿ ರಂಜಿತಾ, ಮಲತಂದೆ ಕೆಂಡಗಣ್ಣ ಸ್ವಾಮಿ, ಅವರ ತಂದೆ ಸ್ವಾಮಿ ಮತ್ತು ರಂಜಿತಾ ಅವರ ತಾಯಿ ಮಹದೇವಮ್ಮ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿವಿ.ಶ್ರೀಶಾನಂದ ಅವರ ರಜಾಕಾಲದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿ ಈ ಕುರಿತಂತೆ ಆದೇಶಿಸಿದೆ.

‘ಅರ್ಜಿದಾರರು ಈಗಾಗಲೇ ತನಿಖಾಧಿಕಾರಿ ಮುಂದೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ. ತನಿಖೆ ಪೂರ್ಣಗೊಂಡಿದ್ದು ಸಂಬಂಧಿಸಿದ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಹಾಗಾಗಿ, ದೋಷಾರೋಪ ಪಟ್ಟಿ ಪ್ರಕಾರ ಅರ್ಜಿದಾರರ ಬಂಧನದ ಅಗತ್ಯ ಕಂಡುಬರುತ್ತಿಲ್ಲ’ ಎಂದು ನ್ಯಾಯಪೀಠ ತಿಳಿಸಿದೆ.

‘ಅರ್ಜಿದಾರರು ತಲಾ ₹50 ಸಾವಿರ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತಕ್ಕೆ ಒಬ್ಬರ ಭದ್ರತಾ ಖಾತರಿ ಒದಗಿಸಬೇಕು. ಸಾಕ್ಷ್ಯಾಧಾರ ತಿರುಚಲು ಹಾಗೂ ನಾಶಪಡಿಸಲು ಯತ್ನಿಸಬಾರದು. ಒಂದು ವಾರದೊಳಗೆ ವಿಚಾರಣಾ ನ್ಯಾಯಾಲಯದ ಮುಂದೆ ಹಾಜರಾಗಬೇಕು. ನ್ಯಾಯಾಲಯದ ಪೂರ್ವಾನುಮತಿ ಪಡೆಯದೇ ಚಾಮರಾಜನಗರ ಜಿಲ್ಲೆ ತೊರೆಯಬಾರದು’ ಎಂದು ನ್ಯಾಯಪೀಠ ಅರ್ಜಿದಾರರಿಗೆ ಷರತ್ತು ವಿಧಿಸಿದೆ.

ಮಕ್ಕಳ ಮೊದಲ ತಂದೆ ನಂಜೇಗೌಡ ಅವರ ತಂದೆ ಮಾದೇಗೌಡ ನೀಡಿದ ಮಾಹಿತಿ ಆಧರಿಸಿ ಚಾಮರಾಜನಗರ ಜಿಲ್ಲೆಯ ಮಕ್ಕಳ ಸಂರಕ್ಷಣಾ ಘಟಕದ ಸಮನ್ವಯ ಅಧಿಕಾರಿ ಎಲ್.ಸಿದ್ದರಾಜು 2025ರ ಡಿಸೆಂಬರ್ 4ರಂದು ಚಾಮರಾಜನಗರ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದರನ್ವಯ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಆರೋಪಿಗಳಿಗೆ ಚಾಮರಾಜನಗರದ ಜಿಲ್ಲಾ ಪ್ರಧಾನ ಸಿವಿಲ್ (ಹಿರಿಯ) ಮತ್ತು ಸಿಜೆಎಂ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿ 2026ರ ಜನವರಿ 12ರಂದು ಆದೇಶಿಸಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-37-931086413

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.