ಚಾಮರಾಜನಗರ: ‘ಕಾನೂನು ಸೇವೆಗಳ ಪ್ರಾಧಿಕಾರ, ಸರ್ಕಾರೇತರ ಸಂಸ್ಥೆಗಳು, ಸ್ವಸಹಾಯ ಸಂಘಗಳು, ಕಾರ್ಮಿಕ ಸಂಘಗಳು ಸೇರಿದಂತೆ ಇತರೆ ಇಲಾಖೆಗಳ ಸಹಕಾರದೊಂದಿಗೆ ಜೂನ್ 12ರಂದು ಜಿಲ್ಲೆಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ ನಡೆಯುತ್ತಿದ್ದು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಶ್ರೀರೂಪಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯ ವಿರುದ್ಧ ಜನಾಭಿಪ್ರಾಯ ರೂಪುಗೊಳಿಸಲು ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕು. ಬಾಲಕಾರ್ಮಿಕ ಪದ್ಧತಿ ವಿರುದ್ಧ ಹೋರಾಟ ನಡೆಸುತ್ತಿರುವ ಸಂಘ ಸಂಸ್ಥೆಗಳು, ಸಂಘಗಳು, ಸಾಮಾಜಿಕ ಕಾರ್ಯಕರ್ತರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು’ ಎಂದರು.

‘ಜೂನ್ 12ರಂದು ಎಲ್ಲ ಸರ್ಕಾರಿ ನೌಕರರು ಕೆಲಸ ನಿರ್ವಹಿಸುತ್ತಿರುವ ಸ್ಥಳಗಳಲ್ಲಿ ದಿನಾಚರಣೆ ಅಂಗವಾಗಿ ಪ್ರಮಾಣ ವಚನ ಸ್ವೀಕರಿಸಬೇಕು. ಶಾಲಾ, ಕಾಲೇಜುಗಳಲ್ಲಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಅಧಿಕಾರಿಗಳು, ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಸಹ ಪ್ರಮಾಣ ವಚನ ಸ್ವೀಕರಿಸಬೇಕು’ ಎಂದರು.

‘ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯ ಕುರಿತು ಜಾಗೃತಿ ಮೂಡಿಸಬೇಕು. ಶಾಲಾ-ಕಾಲೇಜುಗಳಲ್ಲಿ ಎನ್ಸಿಸಿ ಹಾಗೂ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಅರಿವು ಜಾಥಾ ಏರ್ಪಡಿಸಬೇಕು. ಬಾಲ ಹಾಗೂ ಕಿಶೋರ ಕಾರ್ಮಿಕ ಮುಕ್ತ ಗ್ರಾಮಗಳನ್ನು ಗುರುತಿಸಿ ಪ್ರಶಸ್ತಿ,ಪ್ರಮಾಣ ಪತ್ರಗಳನ್ನು ನೀಡಿ ಗೌರವಿಸಬೇಕು’ ಎಂದರು.

‘ಬಾಲಕಾರ್ಮಿಕ ವಿರೋಧಿ ದಿನದ ಮಹತ್ವ ಕುರಿತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಚಿತ್ರಕಲೆ, ಪ್ರಬಂಧ, ಚರ್ಚಾ ಸ್ಪರ್ಧೆಗಳನ್ನು ಆಯೋಜಿಸಬೇಕು. ಬಾಲ ಹಾಗೂ ಕಿಶೋರ ಕಾರ್ಮಿಕ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಕರನ್ನು ಗೌರವಿಸಬೇಕು’ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ್, ಜಿಲ್ಲಾ ಕಾರ್ಮಿಕ ಅಧಿಕಾರಿ ರಾಮಚಂದ್ರಯ್ಯ, ಕಾರ್ಮಿಕ ಯೋಜನಾ ಸೊಸೈಟಿಯ ನಿರ್ದೇಶಕ ಮಹೇಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮುನಿರಾಜು, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಸ್. ಚಿದಂಬರ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವಿಶ್ವನಾಥ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುಳಾ, ಜಂಟಿ ಕೃಷಿ ನಿರ್ದೇಶಕಿ ಸುಷ್ಮಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-37-201741217

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.