ಚಾಮರಾಜನಗರ: ‘ಮುಖ್ಯಮಂತ್ರಿ ಸಿದ್ದರಾಮಯ್ಯನವರು ಏ.21ರಂದು ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ರಚಿಸಲಾಗಿರುವ ಸಮಿತಿಗಳಲ್ಲಿರುವ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಶ್ರೀರೂಪಾ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಕಾರ್ಯಕ್ರಮ ಆಯೋಜನೆಗೆ ಸುಸಜ್ಜಿತ ವೇದಿಕೆ, ಗಣ್ಯರಿಗೆ ಶಿಷ್ಟಾಚಾರದ ಅನುಸಾರ ವ್ಯವಸ್ಥೆ, ಸಾರ್ವಜನಿಕರಿಗೆ ಆಸನ, ತಾತ್ಕಾಲಿಕ ಶೌಚಾಲಯಗಳ ನಿರ್ಮಾಣ, ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು. ಕಾರ್ಯಕ್ರಮ ನಡೆಯುವ ಕ್ರೀಡಾಂಗಣ, ಆಹಾರ ವಿತರಣೆ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಸೂಚಿಸಿದರು.

ಆಹ್ವಾನ ಪತ್ರಿಕೆಯ ಮುದ್ರಣ, ವಿತರಣೆ ಸಮರ್ಪಕವಾಗಿ ನಡೆಯಬೇಕು, ನಿಗದಿಪಡಿಸಿರುವ ಸ್ಥಳದಲ್ಲಿ ಹೆಲಿಪ್ಯಾಡ್ ನಿರ್ಮಾಣವಾಗಬೇಕು, ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೊಳ್ಳಲಿರುವ ಕಾಮಗಾರಿಗಳ ವ್ಯಾಪ್ತಿಯ ಇಲಾಖೆ ಅಧಿಕಾರಿಗಳು ಉದ್ಘಾಟನಾ ಪ್ರಕ್ರಿಯೆಗೆ ಪೂರಕ ಕಾರ್ಯಗಳನ್ನು ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು.

ಆರೋಗ್ಯ ಸಮಿತಿ, ಆಹಾರ ಮತ್ತು ಕುಡಿಯುವ ನೀರಿನ ಸಮಿತಿ ಸಹಿತ ಎಲ್ಲ ಸಮಿತಿಗಳು ಹೊಣೆಗಾರಿಕೆಯಿಂದ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಜವರೇಗೌಡ, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಡಿವೈಎಸ್ಪಿ ಸ್ನೇಹಾ ರಾಜ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶೃತಿ, ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ತಹಶೀಲ್ದಾರ್ ತನ್ಮಯ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಕಿರಣ್, ಕಾವೇರಿ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಹೇಶ್, ಚಾಮರಾಜನಗರ ವೈದ್ಯಕೀಯ ಕಾಲೇಜಿನ ಡೀನ್ ಮತ್ತು ನಿರ್ದೇಶಕ ಡಾ.ಮಂಜುನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಚಿದಂಬರ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ವೆಂಕಟೇಶ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸುಷ್ಮಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-37-317430447

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.