ಸಂತೇಮರಹಳ್ಳಿ: ಕಾಲೇಜಿಗೆ ಸೌಲಭ್ಯಗಳನ್ನು ಒದಗಿಸಿಕೊಡಲಾಗುವುದು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.

ಸಮೀಪದ ಭೋಗಾಪುರದ ಪರಿಶಿಷ್ಟ ಜಾತಿ ಹಾಗೂ ವರ್ಗಗಳ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ನಡೆದ ಸಾಂಸ್ಕೃತಿಕ, ಕ್ರೀಡೆ, ಎನ್ಎಸ್ಎಸ್, ರೆಡ್ಕ್ರಾಸ್, ರೇಂಜರ್ಸ್ ಮತ್ತು ರೋವರ್ಸ್ ಹಾಗೂ ವಿವಿಧ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಕಾಲೇಜಿನ ಬೇಡಿಕೆಯಂತೆ ಸುತ್ತುಗೋಡೆ, ಹಾಸ್ಟೆಲ್ ವ್ಯವಸ್ಥೆ ಸೇರಿದಂತೆ ಬಾಕಿ ಕಾಮಗಾರಿ ಆದಷ್ಟು ಬೇಗ ಮಾಡಲಾಗುವುದು. ಅಲ್ಲದೆ ಎಂಎಸ್ಐಎಲ್ ವತಿಯಿಂದ ಕಾಲೇಜಿಗೆ ಸದ್ಯದಲ್ಲೇ 50 ಡೆಸ್ಕ್ಗಳು ಹಾಗೂ ಕುಡಿಯುವ ನೀರಿನ ಸೌಲಭ್ಯ ಒದಗಿಸಿಕೊಡಲಾಗುವುದು. ಎಲ್ಲ ಸೌಲಭ್ಯಗಳನ್ನು ಒದಗಿಸಿದಾಗ ಇದೊಂದು ಸುಸಜ್ಜಿತ ಕಾಲೇಜು ಆಗಲಿದೆ ಎಂದರು.

ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಶಿಕ್ಷಣದಿಂದ ಮಾತ್ರ ಎಲ್ಲ ಅಭಿವೃದ್ಧಿಯು ಸಾಧ್ಯವಾಗಲಿದೆ. ಹಾಗಾಗೀ ಸರ್ಕಾರದಿಂದ ದೊರೆಯುವ ಎಲ್ಲ ಸೌಕರ್ಯಗಳನ್ನು ಸದುಪಯೋಗ ಪಡಿಸಿಕೊಂಡು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೂ ಒತ್ತು ನೀಡಬೇಕು ಎಂದು ತಿಳಿಸಿದರು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಶಂಕನಪುರ ಮಹದೇವ ಮಾತನಾಡಿ, ಜಿಲ್ಲೆಯ ಮಂಟೇಸ್ವಾಮಿ, ಮಹದೇಶ್ವರ ಸ್ವಾಮಿ ಕಾವ್ಯಗಳು ಜಾಗತಿಕ ಮಟ್ಟದಲ್ಲಿ ಪ್ರಾಮುಖ್ಯತೆ ಪಡೆದಿವೆ. ಇವುಗಳ ಬಗ್ಗೆ ಜಿಲ್ಲೆಯ ಯುವ ಜನಾಂಗ ಹಾಗೂ ವಿದ್ಯಾರ್ಥಿಗಳು ಅಧ್ಯಯನ ಮಾಡಿ ಜೀವನ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು. ಸಿಡಿಎಸ್ ಸದಸ್ಯ ನಾಗೇಂದ್ರ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳು ಚೆನ್ನಾಗಿ ಓದಿ ಶೇ ನೂರರಷ್ಟು ಫಲಿತಾಂಶ ತಂದುಕೊಡುವ ಮೂಲಕ ಶಾಸಕರಿಗೆ, ಕಾಲೇಜಿಗೆ ಕೀರ್ತಿ ತಂದುಕೊಡಬೇಕು ಎಂದು ತಿಳಿಸಿದರು.

ಪ್ರಾಂಶುಪಾಲ ಡಾ.ಪಿ.ದೇವರಾಜು, ಸಾಂಸ್ಕೃತಿಕ ವೇದಿಕೆ ಸಂಚಾಲಕ ಪ್ರೊ.ನಂಜುಂಡಯ್ಯ, ವಿದ್ಯಾರ್ಥಿ ಕ್ಷೇಮ ಪಾಲನೆ ಸಂಚಾಲಕ ಡಾ.ವಿ.ಆರ್.ರಮೆಶ್ ಬಾಬು, ಐಕ್ಯುಎಸಿ ಎನ್ಎಸ್ಎಸ್, ರೆಡ್ಕ್ರಾಸ್ ಸಂಚಾಲಕ ಆರ್.ರಂಗಸ್ವಾಮಿ, ಯುಯುಸಿಎಂ ಮತ್ತು ಐಟಿ ಸಂಚಾಲಕ ಟಿ.ಆರ್.ಗಿರೀಶ್, ದೈಹಿಕ ಶಿಕ್ಷಣ ನಿರ್ದೇಶಕ ಮನೋಜ್, ರಮೇಶ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-37-565324953

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.