ಚಾಮರಾಜನಗರ: ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಸಂಬಂಧ ‘ಜಿಲ್ಲಾ ಮುನ್ನಡೆ’ ಕಾರ್ಯಕ್ರಮ ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿ ಶ್ರೀರೂಪಾ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಯಿತು.

ಚಾಮರಾಜನಗರ ವಿಶ್ವವಿದ್ಯಾಲಯ ವ್ಯಾಪ್ತಿಗೆ ಒಳಪಡುವ ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳ ಪ್ರಾಂಶುಪಾಲರು, ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಚರ್ಚಿಸಿದರು. ಪದವಿ ವಿದ್ಯಾರ್ಥಿಗಳು ಹಾಗೂ ಈಗಾಗಲೇ ವ್ಯಾಸಂಗ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಸಹಕಾರಿಯಾಗುವಂತೆ ಜಿಲ್ಲಾ ಮುನ್ನಡೆ ಕಾರ್ಯಕ್ರಮ ರೂಪಿಸುವ ಕುರಿತು ಸಮಾಲೋಚಿಸಲಾಯಿತು.

ಪದವಿ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ತಿಳಿವಳಿಕೆ, ಮಾರ್ಗದರ್ಶನ ನೀಡುವುದರ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಸಜ್ಜುಗೊಳಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಇಂಡಿಯಾ ಫಾರ್ ಐಎಎಸ್ ಸಂಸ್ಥೆಯ ಸಹಯೋಗದಲ್ಲಿ ಕಾರ್ಯಕ್ರಮ ಜಾರಿಗೊಳಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಸಿ.ಎಸ್.ಆರ್ ಸಂಯೋಜಕರೊಂದಿಗೆ ಇಂಡಿಯಾ ಫೋರ್ ಐಎಎಸ್ ಸಂಸ್ಥೆಯ ಪ್ರತಿನಿಧಿಗಳು, ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-37-525698249

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.