ಚಾಮರಾಜನಗರ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮೂರು ವರ್ಷ ಕಳೆದರೂ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಸಹಿತ ದಲಿತರು ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಇರುವ ನಿಗಮ ಗಳಿಂದ ಒಂದು ಕೊಳವೆಬಾವಿ ಕೊರೆಸಿಕೊಟ್ಟಿಲ್ಲ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್ ಆರೋಪಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತರು ಹಾಗೂ ಅಹಿಂದ ವರ್ಗಗಳ ಬೆಂಬಲದೊಂದಿಗೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ನಂಬಿ ಮತ ಹಾಕಿದ್ದ ಸಮುದಾಯಗಳನ್ನು ನಡುನೀರಿನಲ್ಲಿ ಕೈಬಿಟ್ಟಿದ್ದಾರೆ. ಮೂರು ವರ್ಷಗಳಲ್ಲಿ ಒಂದೂ ಬೋರ್ವೆಲ್ ಕೊರೆಸಿಕೊಡಲು ಸಾಧ್ಯವಾಗದ ಮುಖ್ಯಮಂತ್ರಿ ಎಂಬ ಇತಿಹಾಸ ಬರೆದುಹೋಗಿದ್ದಾರೆ ಎಂದು ವ್ಯಂಗ್ಯವಾಡಿದರು.

ಸದಾ ಸಂವಿಧಾನ ಹಾಗೂ ಅಂಬೇಡ್ಕರ್ ಹೆಸರು ಜಪ ಮಾಡುವ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಎಸ್ಸಿಎಸ್ಪಿ, ಟಿಎಸ್ಪಿ ಅನುದಾನವನ್ನು ಗ್ಯಾರಂಟಿ ಯೋಜನೆ ಗಳಿಗೆ ದುರ್ಬಳಕೆ ಮಾಡಿಕೊಂಡಾಗಲೂ ದನಿ ಎತ್ತದೆ ಸಮುದಾಯಗಳಿಗೆ ಮೋಸ ಮಾಡಿದ್ದಾರೆ. ಸಂಪುಟ ಪುನಾರಚನೆ ವೇಳೆ ಮಹದೇವಪ್ಪ ಅವರನ್ನು ಕೈಬಿಡುವುದು ಒಳಿತು ಎಂದರು.

ನಿಗಮಗಳಿಂದ ಯಾವುದೇ ಸೌಲಭ್ಯಗಳು ಸಿಗದೆ ಅತಂತ್ರರಾಗಿರುವ ಸಮುದಾಯಗಳ ಫಲಾನುಭವಿಗಳ ಪರ ಬಿಜೆಪಿ ಜಿಲ್ಲಾ ಘಟಕ ಶೀಘ್ರ ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮಗಳ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.

ಮುಖಂಡ ಮಂಜು ಕೋಡಿಉಗನೆ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ದೊರೆಯ ದಂತೆ ಒಳ ಒಪ್ಪಂದ ಮಾಡಿಕೊಂಡಿರುವ ಅನುಮಾನ ಕಾಡುತ್ತಿದೆ. 8 ವರ್ಷ ಮುಖ್ಯಮಂತ್ರಿಯಾಗಿ ಅಧಿಕಾರ ಅನುಭವಿಸಿದ ಸಿದ್ದರಾಮಯ್ಯ ಪಕ್ಷಕ್ಕಾಗಿ ದಶಕಗಳ ಕಾಲ ದುಡಿದಿರುವ ಜಿ.ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ ಅವರನ್ನು ಬದಿಗೆ ಸರಿಸಿ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುತ್ತಿರುವುದು ಸಮುದಾಯಕ್ಕೆ ಮಾಡುತ್ತಿರುವ ಅನ್ಯಾಯ ಹಾಗೂ ಜಾತಿಪ್ರತಿಷ್ಠೆಗೆ ಮಣೆ ಹಾಕುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ ಎಂದು ಟೀಕಿಸಿದರು.

ದಲಿತ ಸಮುದಾಯಗಳ ಹಿತದೃಷ್ಟಿ ಯಿಂದ ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಸತೀಶ್ ಜಾರಕಿಹೊಳಿ ಸೇರಿದಂತೆ ಅರ್ಹರು ಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಇಡಬೇಕು ಎಂದರು.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಮೂಡ ಹಳ್ಳಿ ಮೂರ್ತಿ, ಶೇಷಪ್ಪ ಪಾಸ್ವಾನ್, ಎಸ್ಟಿ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಗಡೆ ಗುರುಪ್ರಸಾದ್, ಎಸ್ಸಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಹೇಮಂತ್ ಇದ್ದರು

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-37-791453458

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.