ಕೊಳ್ಳೇಗಾಲ: ತಾಲ್ಲೂಕಿನ ಪಾಳ್ಯ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿ.ರವಿ ಹಾಗೂ ಉಪಾಧ್ಯಕ್ಷರಾಗಿ ನಂಜುಂಡಸ್ವಾಮಿ ಅವರು ಶುಕ್ರವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ತಾಲ್ಲೂಕಿನ ಪಾಳ್ಯ ಗ್ರಾಮದ ಸೊಸೈಟಿಯಲ್ಲಿ ಚುನಾವಣೆ ನಡೆಯಿತು. ಚುನಾವಣಾಧಿಕಾರಿಯಾಗಿ ನಾಗೇಶ್ ಕರ್ತವ್ಯ ನಿರ್ವಹಿಸಿದರು.

ಬಿ.ರವಿ ಮಾತನಾಡಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷನಾಗಿ ನನ್ನನ್ನು ಆಯ್ಕೆ ಮಾಡಲು ಕಾರಣರಾದ ಎಲ್ಲಾ ನಿರ್ದೇಶಕರು ಹಾಗೂ ಮುಖಂಡರಿಗೂ ಧನ್ಯವಾದ ಸಲ್ಲಿಸುತ್ತೇನೆ. ನನ್ನ ಅವಧಿಯಲ್ಲಿ ಸಹಕಾರ ಕ್ಷೇತ್ರದಲ್ಲಿ ರೈತರಿಗೆ ನ್ಯಾಯ ಒದಗಿಸಲು ಶ್ರಮಿಸುವುದಾಗಿ ಶ್ರಮಿಸುತ್ತೇನೆ. ಕೃಷಿ ಸಹಕಾರ ಸಂಘವನ್ನು ಅಭಿವೃದ್ಧಿ ಪಡಿಸುತ್ತೇನೆ ಹಾಗೂ ಸರ್ಕಾರದಿಂದ ಬರುವ ಸವಲತ್ತುಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ಜವಾಬ್ದಾರಿ ನಿರ್ವಹಿಸುತ್ತೇನೆ ಎಂದರು.

ಈ ವೇಳೆ ನೂತನ ಪದಾಧಿಕಾರಿಗಳಿಗೆ ಗ್ರಾಮದ ಮುಖಂಡರು ಹಾಗೂ ಅಭಿಮಾನಿಗಳು ಅಭಿನಂದಿಸಿದರು. ಈ ಚುನಾವಣೆಯಲ್ಲಿ ವಿ.ರಾಜುನಾಯಕ, ರಘು, ಕಪ್ಪಡಿಶೆಟ್ಟಿ, ಎನ್. ನಂಜುಂಡಸ್ವಾಮಿ, ಬಿ.ಶಿವಮಲ್ಲು, ಎಚ್ ಸೌಮ್ಯ, ಕೃಷ್ಣವೇಣಿ ಹಾಜರಿದ್ದರು. ಹುಚ್ಚಣ್ಣ, ಗೌರಯ್ಯ ಗೈರಾಗಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-37-480327875

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.