ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಜಿಲ್ಲಾ ದಸರಾ ಮಹೋತ್ಸವಕ್ಕೆ ಚಾಲನೆ ಇಂದು

ಬೆಳಿಗ್ಗೆ 10.15ಕ್ಕೆ ಚಾಮರಾಜೇಶ್ವರ ದೇವಾಲಯದಲ್ಲಿ ಪೂಜೆಯೊಂದಿಗೆ ಶುರು
Last Updated 7 ಅಕ್ಟೋಬರ್ 2021, 7:02 IST
ಅಕ್ಷರ ಗಾತ್ರ

ಚಾಮರಾಜನಗರ: ಮೈಸೂರು ದಸರಾ ಅಂಗವಾಗಿ ನಾಲ್ಕು ದಿನ ನಗರದಲ್ಲಿ ನಡೆಯಲಿರುವ ಜಿಲ್ಲಾ ದಸರಾ ಮಹೋತ್ಸವಕ್ಕೆ ಗುರುವಾರ (ಅ.7) ಬೆಳಿಗ್ಗೆ 10.15ಕ್ಕೆ ಚಾಮರಾಜೇಶ್ವರ ದೇವಾಲಯದಲ್ಲಿ ಪೂಜಾ ಕೈಂಕರ್ಯದೊಂದಿಗೆ ಚಾಲನೆ ಸಿಗಲಿದೆ.10ರಂದು ದಸರಾ ಮಹೋತ್ಸವ ಸಮಾಪನಗೊಳ್ಳಲಿದೆ.

ಕೋವಿಡ್‌ ಹಾವಳಿಯ ಕಾರಣಕ್ಕೆ ಹೆಚ್ಚು ಅದ್ಧೂರಿ ಇಲ್ಲದೆ ಈ ಬಾರಿ ದಸರಾ ಆಚರಿಸಲಾಗುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳಿಗಷ್ಟೇ ನಾಡ ಹಬ್ಬ ಮೀಸಲಾಗಿದೆ. ವಿವಿಧ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿರುವ ಹಾಗೂ ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಲಾಗಿದೆ.

ಗುರುವಾರ ಸಂಜೆ 5.30ಕ್ಕೆ ಚಾಮರಾಜೇಶ್ವರ ದೇವಾಲಯದ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ದಸರಾ ಮಹೋತ್ಸವ ಉದ್ಘಾಟನೆ ನೆರವೇರಲಿದೆ.

ಚಾಮರಾಜೇಶ್ವರ ದೇವಾಲಯದ ಆವರಣದಲ್ಲಿ ನಿರ್ಮಿಸಲಾಗಿರುವ ವೇದಿಕೆ ಹಾಗೂ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್‌.ಪಟೇಲ್‌ ಸಭಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಗುರುವಾರ ಮಧ್ಯಾಹ್ನ 2 ಗಂಟೆಗೆ ಜೆ.ಎಚ್‌.ಪಟೇಲ್‌ ಸಭಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಲಿದೆ.

ಖ್ಯಾತ ಜಾನಪದ ಗಾಯಕ, ಜಾನಪದ ಅಕಾಡೆಮಿ ಸದಸ್ಯ‌ ಸಿ.ಎಂ.ನರಸಿಂಹಮೂರ್ತಿ ನೇತೃತ್ವದ ತಂಡ, ಕನ್ನಡ ಕೋಗಿಲೆ ರಿಯಾಲಿಟಿ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಿ ಜನಮನ್ನಣೆ ಗಳಿಸಿದ್ದ ಮಹೇಶ್‌ ಅವರ ತಂಡ ಸೇರಿದಂತೆ ಸ್ಥಳೀಯ ಕಲಾವಿದರನ್ನು ಒಳಗೊಂಡ ಹಲವು ತಂಡಗಳು ನಾಲ್ಕೂ ದಿನಗಳ ಕಾಲ ಎರಡು ವೇದಿಕೆಗಳಲ್ಲಿ ಜನರಿಗೆ ಸಾಂಸ್ಕೃತಿಕ ರಸದೌತಣವನ್ನು ಉಣಬಡಿಸಲಿವೆ.

ಕೊಂಚ ಮಂಕು: ಭೋದನಾ ಆಸ್ಪತ್ರೆ ಉದ್ಘಾಟನೆ ಸಮಾರಂಭವೂ ಗುರುವಾರವೇ ನಡೆಯಲಿರುವುದರಿಂದ ಜಿಲ್ಲಾ ದಸರಾ ಮಹೋತ್ಸವ ಚಾಲನಾ ಸಮಾರಂಭಕ್ಕೆ ಸ್ವಲ್ಪ ಮಂಕು ಕವಿದಂತೆ ಭಾಸವಾಗುತ್ತಿದೆ. ಜಿಲ್ಲಾಡಳಿತದ ಎಲ್ಲ ಅಧಿಕಾರಿ, ಸಿಬ್ಬಂದಿ ವರ್ಗ ರಾಷ್ಟ್ರಪತಿ, ರಾಜ್ಯಪಾಲ, ಮುಖ್ಯಮಂತ್ರಿ ಹಾಗೂ ಇತರ ಸಚಿವರು ಭಾಗವಹಿಸುವ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದ ಯಶಸ್ಸಿಗೆ ಗಮನ ನೀಡಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ದಸರಾ ಮಹೋತ್ಸವದ ಕೆಲಸದಲ್ಲಿ ತೊಡಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT