ಚಾಮರಾಜನಗರ: ಆದಿವಾಸಿ ಸಮುದಾಯಗಳು ಹೆಚ್ಚಾಗಿರುವ ಬೇಡಗುಳಿ ಪ್ರದೇಶಕ್ಕೆ ಜಿಲ್ಲಾಧಿಕಾರಿ ಶ್ರೀರೂಪಾ ಬುಧವಾರ ಭೇಟಿನೀಡಿ ಸೋಲಿಗ ಸಮುದಾಯದವರೊಂದಿಗೆ ಸಂವಾದ ನಡೆಸಿ ಸಮಸ್ಯೆ ಆಲಿಸಿದರು.

ಸೋಲಿಗರ ಹಾಡಿಗಳಿಗೆ ತೆರಳಿದ ಜಿಲ್ಲಾಧಿಕಾರಿ ಕುಡಿಯುವ ನೀರು, ವಿದ್ಯುತ್, ವಸತಿ ಸೇರಿದಂತೆ ಮೂಲಸೌಕರ್ಯಗಳ ಕುರಿತು ಮಾಹಿತಿ ಪಡೆದರು. ಇದೇ ವೇಳೆ ಟಿವಿಎಸ್ ಸಂಸ್ಥೆ, ಎಸ್.ಎಸ್.ಟಿ ವತಿಯಿಂದ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಮಹಿಳೆಯರು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು, ಸಮುದಾಯದ ಮಕ್ಕಳು ಶಾಲೆಯನ್ನು ತೊರೆಯದ ಉನ್ನತ ಶಿಕ್ಷಣ ಪಡೆಯಬೇಕು ಎಂದು ಸಲಹೆ ನೀಡಿದರು.

ಗಿರಿಜನ ಮಹಿಳೆಯರು ತಯಾರಿಸುವ ಉತ್ಪನ್ನಗಳನ್ನು ‘ಚಾಮರಸಿ’ ಬ್ರಾಂಡ್ ಮೂಲಕ ಪ್ರಚಾರ ಮಾಡಲಾಗುತ್ತಿದ್ದು ಮಹಿಳೆಯರ ಸ್ವಾವಲಂಬನೆಗೆ ಒತ್ತು ನೀಡಲಾಗಿದೆ. ಸ್ತ್ರೀ ಸೌಖ್ಯ ಯೋಜನೆಯಡಿ ಮಹಿಳೆಯರು ಕ್ಯಾನ್ಸರ್ ತಪಾಸಣೆಗೆ ಒಳಗಾಗಬೇಕು ಎಂದು ಸಲಹೆ ನೀಡಿದರು.

ಬೇಡಗುಳಿಯ ಆಶ್ರಮ ಶಾಲೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಶ್ರೀರೂಪಾ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಶಿಕ್ಷಣದ ಗುಣಮಟ್ಟ ಹಾಗೂ ಶಿಕ್ಷಕರ ಕಾರ್ಯನಿರ್ವಹಣೆ ಕುರಿತು ಪರಿಶೀಲಿಸಿದರು.

ಈ ಸಂದರ್ಭ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್.ಎಸ್.ಬಿಂದ್ಯಾ ಹಾಗೂ ಇತರೆ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-37-1408796034

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.