ಮಂಗಳವಾರ, 26 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

35 ಕೆ.ಜಿ ಜಿಂಕೆ ಮಾಂಸ ವಶ: ಇಬ್ಬರ ಬಂಧನ

Published 2 ಜೂನ್ 2023, 14:40 IST
Last Updated 2 ಜೂನ್ 2023, 14:40 IST
ಅಕ್ಷರ ಗಾತ್ರ

ಕೊಳ್ಳೇಗಾಲ: ತಾಲ್ಲೂಕಿನ ಮಧುವನಹಳ್ಳಿ ಸಮೀಪದ ರಾಯತರ ಹಳ್ಳ ಅರಣ್ಯ ಪ್ರದೇಶದಲ್ಲಿ ಜಿಂಕೆಯನ್ನು ಕೊಂದು ಮಾಂಸ ಸಾಗಣೆ ಮಾಡುತ್ತಿದ್ದ ಇಬ್ಬರನ್ನು ಶುಕ್ರವಾರ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ.

ತಾಲ್ಲೂಕಿನ ಕುಣಗಳ್ಳಿಯ ಮೂರ್ತಿ, ರಾಮು ಬಂಧಿತ ಆರೋಪಿಗಳು. ಶಾಂತರಾಜು, ಮಧು ಹಾಗೂ ವಿಜಯ್ ಮೂವರು ಪರಾರಿಯಾಗಿದ್ದಾರೆ.

ಈ ಐವರು ಅಕ್ರಮವಾಗಿ ಅರಣ್ಯ ಪ್ರವೇಶ ಮಾಡಿ ನಾಡ ಬಂದೂಕಿನಿಂದ ಜಿಂಕೆಯನ್ನು ಕೊಂದು ಅದರ ಮಾಂಸವನ್ನು ಮಾರಾಟ ಮಾಡುವ ಸಲುವಾಗಿ ಸಾಗಣೆ ಮಾಡುತ್ತಿದ್ದರು. ಖಚಿತ ಮಾಹಿತಿಯಂತೆ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಆರ್‌ಎಫ್‌ಒ ವಾಸು ಹಾಗೂ ಉಪ ವಲಯ ಅರಣ್ಯ ಅಧಿಕಾರಿ ಪ್ರಭುಸ್ವಾಮಿ ತಮ್ಮ ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ಬಂಧಿತರಿಂದ 35 ಕೆ.ಜಿ ಮಾಂಸ, 3 ಬೈಕ್, 2 ಮೊಬೈಲ್ ಹಾಗೂ ಎರಡು ಚಾಕುಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ದೂರು ದಾಖಲಾಗಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT