ಚಾಮರಾಜನಗರ: ಅಂಗವಿಕಲರು ಕಾನೂನುಬದ್ಧ ಹಕ್ಕುಗಳ ಬಗ್ಗೆ ಜಾಗೃತರಾಗಿ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ್ ಸಲಹೆ ನೀಡಿದರು.

ನಗರದ ಸಿಡಿಎಸ್ ಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನಗರಾಭಿವೃದ್ಧಿ ಕೋಶ, ನಗರಸಭೆ ಸಂಯುಕ ಆಶ್ರಯದಲ್ಲಿ ಅಂಗವಿಕಲರಿಗೆ ಅಯೋಜಿಸಿದ್ದ ಕಾನೂನು ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರ, ಅಂಗವಿಕಲರ ಹಕ್ಕುಗಳ ಕಾಯ್ದೆ ಅಡಿಯಲ್ಲಿ ಅಂಗವಿಕಲರಿಗೆ ಶಿಕ್ಷಣ, ಉದ್ಯೋಗ ಮತ್ತು ಸಾರ್ವಜನಿಕ ಸೇವೆಗಳಲ್ಲಿ ಸಮಾನ ಅವಕಾಶಗಳನ್ನು ನೀಡಲಾಗಿದೆ. ತಾರತಮ್ಯ ರಹಿತ ಬದುಕು ಸಾಗಿಸುವ, ದೌರ್ಜನ್ಯಗಳ ವಿರುದ್ಧ ಕಾನೂನಾತ್ಮಕ ರಕ್ಷಣೆ ಪಡೆಯುವ ಹಕ್ಕು ನೀಡಲಾಗಿದೆ ಎಂದರು.

ದೇಶದ ಸಂವಿಧಾನ ಸರ್ವರಿಗೂ ಸಮಾನತೆ, ಸಮಾನ ಬದುಕುವ ಹಕ್ಕು ನೀಡಿದೆ. ಅಂಗವಿಕಲರು ಹಕ್ಕುಗಳ ಬಗ್ಗೆ ಅರಿವು ಹೊಂದಬೇಕು, ಅಂಗವಿಕಲರ ಮೇಲೆ ಮಾನಸಿಕ ಹಾಗೂ ದೈಹಿಕ ದೌರ್ಜನ್ಯ, ಶೋಷಣೆಗಲು ನಡೆದರೆ ಕಾನೂನು ಸೇವಾ ಪ್ರಾಧಿಕಾರ ಕಾನೂನು ನೆರವು ನೀಡಲಿದೆ ಎಂದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವೆಂಕಟೇಶ್, ಕಾರ್ಯಪಾಲಕ ಎಂಜಿನಿಯರ್ ರಾಮಚಂದ್ರ, ಪೌರಾಯುಕ್ತ ಪರಶುರಾಮ ಛಲವಾದಿ, ನಗರಸಭೆ ಮಾಜಿ ಸದಸ್ಯ ಅಬ್ರಾರ್ ಅಹಮದ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶ್ರೀನಿವಾಸ, ಪರಿಸರ ಎಂಜಿನಿಯರ್ ರೂಪಾ, ಸಮುದಾಯ ಸಂಘಟನಾ ಅಧಿಕಾರಿ ವೆಂಕಟನಾಯಕ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-37-198676844

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.