ಮಂಗಳವಾರ, ಅಕ್ಟೋಬರ್ 20, 2020
26 °C

ಚಾಮರಾಜನಗರದಲ್ಲಿ 3000 ದಾಟಿದ ಕೋವಿಡ್‌ ಪ್ರಕರಣಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ 80 ಮಂದಿಗೆ ಕೋವಿಡ್–19 ತುತ್ತಾಗಿರುವುದು ಪತ್ತೆಯಾಗಿದೆ. ಈವರೆಗೆ ದಾಖಲಾದ ಪ್ರಕರಣಗಳ ಸಂಖ್ಯೆ 3000 ದಾಟಿದೆ. ಕೋವಿಡ್‌ಯೇತರ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. 23 ಮಂದಿ ಗುಣಮುಖರಾಗಿದ್ದಾರೆ. 

ಗುಂಡ್ಲುಪೇಟೆ ತಾಲೂಕಿನ ಕೋಡಿಹಳ್ಳಿ ಗ್ರಾಮದ 63 ವರ್ಷದ ಮಹಿಳೆ (ರೋಗಿ ಸಂಖ್ಯೆ 4,64,208) ಮಧುಮೇಹದಿಂದ ಬಳಲುತ್ತಿದ್ದರು. ಶನಿವಾರ ಅವರ ಮನೆಯಲ್ಲಿ ಮೃತಪಟ್ಟಿದ್ದರು. ನಂತರ ನಡೆಸಿದ ಕೋವಿಡ್‌ ಪರೀಕ್ಷೆಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಇದರೊಂದಿಗೆ ಕೋವಿಡ್‌ಯೇತರ ಕಾರಣದಿಂದ ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿದೆ. ಸೋಂಕಿನಿಂದಾಗಿ ಈವರೆಗೆ 45 ಮಂದಿ ಕೊನೆಯುಸಿರೆಳೆದಿದ್ದಾರೆ. 

ಭಾನುವಾರ 80 ಪ್ರಕರಣಗಳು ಸೇರಿದಂತೆ  ಜಿಲ್ಲೆಯ ಒಟ್ಟು ದೃಢೀಕೃತ ಪ್ರಕರಣಗಳ ಸಂಖ್ಯೆ 3,018ಕ್ಕೆ ಏರಿದೆ. ಈ ಪೈಕಿ 2,349 ಮಂದಿ ಗುಣಮುಖರಾಗಿದ್ದಾರೆ. 606 ಸಕ್ರಿಯ ಪ್ರಕರಣಗಳಿವೆ. 38 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 159 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ.

ಭಾನುವಾರ 652 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷಿಸಲಾಗಿತ್ತು. ಈ ಪೈಕಿ 574 ಮಂದಿಯ ವರದಿ ನೆಗೆಟಿವ್‌ ಬಂದಿದೆ. 78 ಜನರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಇನ್ನೆರಡು ಪ್ರಕರಣಗಳು ಮೈಸೂರಿನಲ್ಲಿ ದೃಢಪಟ್ಟಿವೆ.

80 ಮಂದಿ ಸೋಂಕಿತರಲ್ಲಿ ಗುಂಡ್ಲುಪೇಟೆ ತಾಲ್ಲೂಕಿನ 36, ಚಾಮರಾಜನಗರದ 16, ಕೊಳ್ಳೇಗಾಲದಿಂದ 18, ಯಳಂದೂರಿನ ಏಳು, ಹನೂರಿನ ಮೂವರು ಇದ್ದಾರೆ.

40,399 ಮಂದಿ ಮೇಲೆ ನಿಗಾ: ಸೋಂಕಿತರ ಪ್ರಾಥಮಿಕ ಸಂಪರ್ಕಿತರು 19,161 ಮತ್ತು ದ್ವಿತೀಯ ಸಂಪರ್ಕಿತರು 21,238 ಸೇರಿದಂತೆ ಒಟ್ಟು 40,399 ಮಂದಿ ಹೋಂ ಕ್ವಾರಂಟೈನ್‌ನಲ್ಲಿದ್ದು, ಅವರ ಆರೋಗ್ಯದ ಮೇಲೆ ಜಿಲ್ಲಾಡಳಿತ ನಿಗಾ ಇಟ್ಟಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು