ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಜಿಲ್ಲಾ ದಸರಾಗೆ ವಿಧ್ಯುಕ್ತ ಚಾಲನೆ

Last Updated 7 ಅಕ್ಟೋಬರ್ 2021, 7:28 IST
ಅಕ್ಷರ ಗಾತ್ರ

ಚಾಮರಾಜನಗರ: ನಾಲ್ಕು ದಿನಗಳ ಕಾಲ ನಡೆಯಲಿರುವ ಜಿಲ್ಲಾ ದಸರಾ ಮಹೋತ್ಸವಕ್ಕೆ ಗುರುವಾರ ಬೆಳಿಗ್ಗೆ ಚಾಮರಾಜೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವ ವಿಧ್ಯುಕ್ತವಾಗಿ ಆರಂಭವಾಯಿತು.

ಶಾಸಕ ಸಿ.ಪುಟ್ಟರಂಗಶೆಟ್ಟಿ, ನಗರಸಭಾ ಅಧ್ಯಕ್ಷೆ ಸಿ.ಎಂ.ಆಶಾ ಜಿಲ್ಲಾ‌ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೊಯರ್ ನಾರಾಯಣರಾವ್, ಹೆಚ್ವುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿ ದೇವಿ ಅವರು ಚಾಮರಾಜೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.


ಬಳಿಕ ಚಾಮರಾಜೇಶ್ವರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿದ ಗಣ್ಯರು, ಸಾಂಕೇತಿಕವಾಗಿ ದೀಪ ಬೆಳಗಿದರು. ದೇವಾಲಯದ ಆವರಣದಲ್ಲಿರುವ ಚಾಮುಂಡೇಶ್ವರಿ ದೇವಿ ಹಾಗೂ ಕೆಂಪನಂಜಾಂಬ ದೇಗುಲಕ್ಕೂ ಭೇಟಿ ನೀಡಿ ಪೂಜೆ ಸಲ್ಲಿಸಿದರು. ದೇವಾಲಯದ ಮುಂಭಾಗದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ, ಪುಣ್ಪಾರ್ಚನೆ ಮಾಡಿದರು.

ಬಳಿಕ ಜನನ ಮಂಟಪದವರೆಗೂ ಮೆರವಣಿಗೆಯಲ್ಲಿ ತೆರಳಿ ಮೈಸೂರು ರಾಜ ವಂಶಸ್ಥರಾದ ಚಾಮರಾಜೇಂದ್ರ ಒಡೆಯರ್ ಅವರು ಜನಿಸಿದ ಸ್ಥಳದಲ್ಲೂ ಪೂಜೆ ಸಲ್ಲಿಸಿದರು.

ಗಮನಸೆಳೆದ ಕಲಾ ತಂಡಗಳು: ಇದಕ್ಕೂ ಮೊದಲು ಚಾಮರಾಜೇಶ್ವರ ಉದ್ಯಾನದ ಬಳಿಯಿಂದ ಶಾಸಕರು ಹಾಗೂ ಇತರ ಗಣ್ಯರನ್ನು ಮಂಗಳವಾದ್ಯ ಗಳೊಂದಿಗೆ ಕಲಾತಂಡಗಳ ಮೆರವಣಿಗೆಯ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಕಂಸಾಳೆ, ಡೋಲು, ವೀರಗಾಸೆ, ಗೊರವರ ಕುಣಿತ, ಬೀಸು ಕಂಸಾಳೆ, ಬ್ಯಾಂಡ್ ಸೆಟ್, ಹುಲಿ ವೇಷ, ಗೊಂಬೆ ಕುಣಿತ ಕಲಾ ತಂಡಗಳು‌ ಮೆರವಣಿಗೆಗೆ‌ ಮೆರುಗು ನೀಡಿದವು.

ಕೋವಿಡ್ ಕಾರಣಕ್ಕೆ ಈ ಬಾರಿ ಸರಳವಾಗಿ ದಸರಾ ಆಚರಿಸಲಾಗುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಮಾತ್ರ‌ ನಾಡ ಹಬ್ಬ ಸೀಮಿತವಾಗಿದೆ.

ಇಂದು ಸಂಜೆ 5.30ಕ್ಕೆ ಅಧಿಕೃತ ಉದ್ಘಾಟನಾ ಸಮಾರಂಭ ನಡೆಯಲಿದೆ. ಅ.10ರಂದು ದಸರಾ ಸಮಾಪನಗೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT