ಚಾಮರಾಜನಗರ: ನಗರದ ದೊಡ್ಡರಸಿನ ಕೊಳಕ್ಕೆ ನೀರು ತುಂಬಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಕನ್ನಡ ಮಹಾಸಭಾದಿಂದ ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶ್ರೀರೂಪಾ ಅವರಿಗೆ ಮನವಿ ಸಲ್ಲಿಸಲಾಯಿತು.

ಬಿಸಿಲಿನ ತಾಪ, ಅಂತರ್ಜಲ ಕುಸಿತ ಹಾಗೂ ಸಮರ್ಪಕ ನಿರ್ವಹಣೆ ಕೊರತೆಯಿಂದ ದೊಡ್ಡರಸಿನ ಕೊಳದಲ್ಲಿ ನೀರಿನ ಸಂಗ್ರಹ ತೀವ್ರ ಕುಸಿತ ಕಂಡಿದೆ. ಚಾಮರಾಜನಗರದಲ್ಲಿದ್ದ ಏಳೆಂಟು ಕೊಳಗಳನ್ನು ಮುಚ್ಚಿಹಾಕಿರುವ ಪರಿಣಾಮ ಅಂತರ್ಜಲ ಮಟ್ಟ ತೀವ್ರ ಕುಸಿತ ಕಂಡಿದ್ದು ಬೇಸಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ಬೋರ್ವೆಲ್ಗಳಲ್ಲಿ ನೀರಿನ ಮಟ್ಟವೂ ಕುಸಿದಿದೆ.

ಹಾಗಾಗಿ ದೊಡ್ಡ ಅರಸಿನ ಕೊಳಕ್ಕೆ ಶಾಶ್ವತವಾಗಿ ನೀರು ತುಂಬಿಸುವ ಕಾರ್ಯಕ್ಕೆ ಜಿಲ್ಲಾಡಳಿತ ಒತ್ತು ನೀಡಬೇಕು. ದೊಡ್ಡ ಅರಸಿನ ಕೊಳ ತುಂಬಿದರೆ ಪಟ್ಟಣ ಪ್ರದೇಶದಲ್ಲಿ ಅಂತರ್ಜಲ ವೃದ್ಧಿಯಾಗಲಿದೆ. ಹಿಂದೆ ಮಳೆಗಾಲದಲ್ಲಿ ದೊಡ್ಡ ಕೆರೆ ತುಂಬಿ ನಂತರ ದೊಡ್ಡ ಅರಸಿನ ಕೊಳವು ತುಂಬಿಕೊಳ್ಳುತ್ತಿತ್ತು. ಚಾಮರಾಜೇಶ್ವರ ದೇವಸ್ಥಾನದ ಮುಂದಿದ್ದ ಕಲ್ಯಾಣಿಗೂ ನೀರು ತುಂಬುವ ವ್ಯವಸ್ಥೆ ಇತ್ತು. ನದಿ ಅಥವಾ ಕೆರೆಯ ಮೂಲದಿಂದ ಕೊಳಕ್ಕೆ ನೀರು ತುಂಬಿಸಬೇಕು ಎಂದು ಜಿಲ್ಲಾಧಿಕಾರಿಗೆ ಒತ್ತಾಯಿಸಿದರು.

ಅಖಿಲ ಕರ್ನಾಟಕ ಕನ್ನಡ ಮಹಾಸಭಾದ ಅಧ್ಯಕ್ಷ ಶ್ರೀನಿವಾಸಗೌಡ, ಪಣ್ಯದಹುಂಡಿ ರಾಜು, ನಿಜಧ್ವನಿ ಗೋವಿಂದರಾಜ, ರವಿಚಂದ್ರ ಪ್ರಸಾದ್ ಕಹಳೆ, ರಾಚಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-37-700012541

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.